ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯ

ಕೊಪ್ಪಳ/ ಕುಷ್ಟಗಿ : ತಾಲೂಕಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕುಷ್ಟಗಿ ರೈತ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿ ನೊಂದ ರೈತಾಪಿ ಜನತೆಗೆ ಕೂಡಲೇ ಬೆಳೆ ನಷ್ಟ ಪರಿಹಾರವನ್ನು ನೀಡಬೇಕಾಗಿತ್ತು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಹಾರ ಅಧ್ಯಯನ ತಂಡಗಳನ್ನು ಕಳಿಸಿ ಸರ್ಕಾರದ ಹಣವನ್ನು ದುಂದು ವೆಚ್ಚ ಮಾಡುತ್ತಿದ್ದಾರೆ ಇದರಿಂದ ನೊಂದ ರೈತರಿಗೆ ಏನೂ ಪ್ರಯೋಜನವಾಗುವುದಿಲ್ಲ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನೊಂದ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಕೂಡಲೇ ಬೆಳೆ ನಷ್ಟ ಪರಿಹಾರ ನೀಡಲು ಮತ್ತು ಪ್ರಜಾಸತ್ತಾತ್ಮಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು.
ದಿನಾಂಕ 9-10-20 26ರಂದು 2 ಗಂಟೆಗಳ ಕಾಲ ರಸ್ತೆ ತಡೆ ಮಾಡುವುದರ ಮೂಲಕ ನಾಶವಾದ ರೈತರ ಬೆಳೆಗೆ ಒಂದು ಎಕರೆಗೆ 50 ಸಾವಿರ ನಷ್ಟ ಪರಿಹಾರ ನೀಡಬೇಕು ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಬೇಕು, ಕುಷ್ಟಗಿ ತಾಲೂಕಿನ 36 ಕೆರೆಗಳಿಗೆ ನೀರು ತುಂಬಬೇಕು, ಪ್ರತಿ ಪಂಚಾಯಿತಿಗೊಂದು ಗೋಶಾಲೆ ಮತ್ತು ಮೇವಿನ ಬ್ಯಾಂಕ್ ತೆರೆಯಬೇಕು ಬೆಳೆ ವಿಮೆ ನೀಡಿ ಎಲ್ಲಾ ರೈತರಿಗೂ ಪೂರ್ಣ ಪ್ರಮಾಣದ ಹಣ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘ ತಾಲೂಕು ಸಮಿತಿ ಕುಷ್ಟಗಿಯ ಅಧ್ಯಕ್ಷರಾದ ಆರ್ ಕೆ ದೇಸಾಯಿ, ಉಪಾಧ್ಯಕ್ಷರಾದ ಅಕ್ಕಮ್ಮ ಮರೆಗೌಡರು, ನಜೀರ್ ಸಾಬ್ ಮೂಲಿಮನಿ, ಕವಿತಾ ಸೇರಿದಂತೆ ಇನ್ನೂ ಹಲವಾರು ರೈತರು ಒತ್ತಾಯಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!