ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಸ್ಕೃತಿ ಸಚಿವರನ್ನು ತಡೆದದ್ದು ಅಕ್ಷಮ್ಯ ಅಪರಾಧ: ಶರಣಬಸವ ಶಾಸ್ತ್ರಿಗಳು

ಬಾಗಲಕೋಟೆ: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಸಂದರ್ಭದಲ್ಲಿ ನಂದಿಧ್ವಜ ಪೂಜೆಗೆ ತೆರಳುತ್ತಿದ್ದ ಸಂಸ್ಕೃತಿ ಇಲಾಖೆಯ ಸಚಿವರನ್ನು ತಡೆದ ಘಟನೆ ಅಕ್ಷಮ್ಯ ಅಪರಾಧವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಸಂಘದ ಅಧ್ಯಕ್ಷರಾದ ಪೂಜ್ಯ ಶ್ರೀ ಶರಣಬಸವ ಶಾಸ್ತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಸಡಗರ, ಸಂಭ್ರಮ ಹಾಗೂ ಪರಂಪರೆಗೆ ವಿಶ್ವಮಟ್ಟದಲ್ಲಿ ಖ್ಯಾತಿ ಹೊಂದಿದೆ. ಇಂತಹ ಮಹತ್ವದ ಉತ್ಸವದಲ್ಲಿ ಸಂಸ್ಕೃತಿ ಇಲಾಖೆಯ ಸಚಿವರನ್ನೇ ತಡೆದಿರುವುದು ನಮ್ಮ ನಾಡಿನ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಪರಂಪರೆಗೆ ಧಕ್ಕೆ ತಂದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳೊಂದಿಗೆ ಸಚಿವರು ಇರುವಾಗ ಇಂತಹ ಕಹಿ ಘಟನೆ ನಡೆದಿರುವುದು ನಿಜಕ್ಕೂ ಖೇದಕರ. ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿನಿಧಿಸುವ ಸಾಂಸ್ಕೃತಿಕ ಉತ್ಸವಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಅವರು ಹೇಳಿದರು.

ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರವು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶರಣಬಸವ ಶಾಸ್ತ್ರಿಗಳು ಒತ್ತಾಯಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!