ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಐ.ಎಸ್. ಮಂಟೂರ ಮಹಾರಾಜರ 12ನೇ ವರ್ಷದ ಸ್ಮರಣೆ ಕಾರ್ಯಕ್ರಮ

ಮುಗಳಖೋಡದಲ್ಲಿ ಸೋಮವಾರ ವಿಶೇಷ ಕಾರ್ಯಕ್ರಮ

ಬಾಗಲಕೋಟೆ/ ಮುಧೋಳ : ಸಹಕಾರಿ ರಂಗದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಸಹಕಾರಿ ಧುರೀಣರು, ರಂಗಭೂಮಿ ಕಲಾವಿದರು ಹಾಗೂ ಹರಿಪಂಥದ ಸಂತರಾಗಿದ್ದ ಐ.ಎಸ್. ಮಂಟೂರ ಮಹಾರಾಜರ 12ನೇ ವರ್ಷದ ಸ್ಮರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಸೋಮವಾರ ಬೆಳಿಗ್ಗೆ 8 ಗಂಟೆಗೆ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಕುಳಲಿ ಶ್ರೀ ಗುರುನಾಥಾರೂಢರ ಮಠದ ಪೂಜ್ಯ ಶಂಕರಾನಂದ ಶ್ರೀಗಳು ವಹಿಸಲಿದ್ದಾರೆ. ಆಶ್ರಮದ ಪೂಜ್ಯ ಶ್ರೀ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ತತ್ವಚಿಂತನ ಕಾರ್ಯಕ್ರಮ ನಡೆಯಲಿದೆ. ಶ್ರೀ ಮಹಾಳಿಂಗೇಶ್ವರ ದೇವರ ಅರ್ಚಕರಾದ ಪೂಜ್ಯ ಗುರುಪ್ರಸಾದ್ ಸ್ವಾಮೀಜಿಯವರು ಉಪಸ್ಥಿತರಿರಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕಲಾವಿದರಿಂದ ಭಜನೆ, ಜನಪದ ಹಾಗೂ ತತ್ವಪದಗಳ ಗಾಯನ, ಗುರುಸೇವಾ ಧುರೀಣರಿಗೆ ಸತ್ಕಾರ, ಸಕಲ ಸದ್ಭಕ್ತರಿಂದ ಮಂಟೂರ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಂಗಲ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಲಿವೆ.

ಮಹಾರಾಜರ ಸಾಮಾಜಿಕ, ಸಹಕಾರಿ ಹಾಗೂ ಸಾಂಸ್ಕೃತಿಕ ಸೇವೆಯನ್ನು ಸ್ಮರಿಸುವ ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತರು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಯುವ ಮುಖಂಡ ಎಲ್. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!