ಜಮಖಂಡಿ: ತಾಲ್ಲೂಕಿನ ತುಂಗಳ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರಿ ಪ್ರಾಚಾರ್ಯರು ಹಾಗೂ ಶಿಕ್ಷಣಶಾಸ್ತç ಉಪನ್ಯಾಸಕ ಹನಮಂತ ಮಗದುಮ ಅವರು ಬರೆದು ಸಲ್ಲಿಸಿದ್ದ ಮಹಾಪ್ರಬಂಧವನ್ನು ಮನ್ನಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಶಿಕ್ಷಣ ವಿಷಯದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಸುರೇಶ ಸಮ್ಮಸಗಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡು ‘ಸ್ವಾಮಿ ಸಿದ್ಧೇಶ್ವರರ ಪ್ರವಚನಗಳಲ್ಲಿ ಮಾನವೀಯ ಮೌಲ್ಯಾಧಾರಿತ ಶೈಕ್ಷಣಿಕ ಚಿಂತನೆಗಳು: ಒಂದು ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು.
ಕಾಲೇಜಿನ ಸಿಡಿಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಪಿಎಚ್.ಡಿ ಪದವಿ ಪಡೆದ ಮಗದುಮ ಅವರನ್ನು ಅಭಿನಂದಿಸಿದ್ದಾರೆ.




















