ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೋಟರಿ ಕ್ಲಬ್ ಕೊರಟಗೆರೆ ವಿಶ್ವ ಪೋಲಿಯೋ ದಿನಾಚರಣೆ.

ರೋಟರಿ ಕ್ಲಬ್ ಕೊರಟಗೆರೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಸ್ಪತ್ರೆ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ದಿನಾಂಕ: 24.10.2026, ಶನಿವಾರ – ವಿಶ್ವ ಪೋಲಿಯೋ ದಿನ ಆಚರಣೆ.

ಕೊರಟಗೆರೆ: ವಿಶ್ವ ಪೋಲಿಯೋ ದಿನದ ಪ್ರಯುಕ್ತ ರೋಟರಿ ಕ್ಲಬ್ ಕೊರಟಗೆರೆ ಹಾಗೂ ತಾಲ್ಲೂಕಿನ ವಿವಿಧ ಇಲಾಖೆಗಳ ವತಿಯಿಂದ ಇಂದು ವಿಶ್ವ ಪೋಲಿಯೋ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ತಾಲ್ಲೂಕು ಆಸ್ಪತ್ರೆಯವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಅಧ್ಯಕ್ಷರಾದ Rtn. ಡಾ. ನರಸಿಂಹಮೂರ್ತಿ ವಿ.ಕೆ. ರವರು, “ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡಬೇಕು. ಎರಡು ಹನಿ ಜೀವದ ಅಮೃತ” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು :
ತಾಲ್ಲೂಕು ಆಸ್ಪತ್ರೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಶ್ರೀಮತಿ ಜೋಶ್ನಾ ರೆಡ್ಡಿ ವೈದ್ಯರಾದ ಡಾ. ರವಿಕುಮಾರ್, ರೋಟರಿ ಕಾರ್ಯದರ್ಶಿ ಹೊನ್ನೇಶ್ ಪಿ.ಕೆ, ಖಜಾಂಚಿ ನಾರಾಯಣಸ್ವಾಮಿ ಎನ್, ಸದಸ್ಯರಾದ ಸುರೇಶ್ ಎನ್.ಯು, ಶಂಕರ್ ಡಿ, ನಾಗೇಂದ್ರ ಎಚ್.ಎನ್, ಪ್ರಸನ್ನ ಕುಮಾರ್. ಎಸ್, ಮಂಜುನಾಥ್ ಎ.ಜಿ ಹಾಗೂ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವರದಿ. ಪ್ರಸನ್ನಕುಮಾರ್ ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!