ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದ್ವಿಚಕ್ರ ವಾಹನ ಸವಾರರಿಗೆ ಮೃತ್ಯುಕೂಪ, ಹದಗೆಟ್ಟ ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ.

ಮಳೆ ಬಂದರೆ ಗುಂಡಿಗಳಲ್ಲಿ ನೀರು, ಸಂಚಾರಕ್ಕೆ ವಾಹನ ಸವಾರರ ಪರದಾಟ..!

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!

ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದಲ್ಲಿ ಕೊರಟಗೆರೆ–ತ್ಯಾಮಗೊಂಡ್ಲು–ನೆಲಮಂಗಲ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ವಾಹನ ಸವಾರರು ಹಾಗೂ ದ್ವಿಚಕ್ರ ವಾಹನ ಸವಾರರು ನಿತ್ಯವೂ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ನೆಲಮಂಗಲಕ್ಕೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ರಸ್ತೆಯಲ್ಲಿರುವ ಗುಂಡಿಗಳು ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡ್ಡುತ್ತಿವೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಅವುಗಳು ಸರಿಯಾಗಿ ಕಾಣಿಸದೆ ಅಪಘಾತದ ಆತಂಕ ಮತ್ತಷ್ಟು ಹೆಚ್ಚಾಗಿದೆ. ಗುಂಡಿಗಳನ್ನು ತಪ್ಪಿಸಲು ಹೋಗಿ ಹಲವು ಸವಾರರು ಬಿದ್ದು ಕೈಕಾಲುಗಳಿಗೆ ಗಾಯ ಮಾಡಿಕೊಂಡಿರುವ ಘಟನೆಗಳೂ ನಡೆದಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಯ ಕುರಿತು ಲೋಕೋಪಯೋಗಿ ಇಲಾಖೆಯ ಸಂಬಂಧಪಟ್ಟ ಎಇಇ ಹಾಗೂ ಎಇ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಕೇವಲ ಎರಡು ಚೀಲ ಸಿಮೆಂಟ್ ಮತ್ತು ಜಲ್ಲಿಕಲ್ಲು ಬಳಸಿ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಆದರೆ, ಒಂದು ತಿಂಗಳೊಳಗೆ ಮತ್ತೆ ರಸ್ತೆ ಹದಗೆಟ್ಟಿದ್ದು, ಗುಂಡಿಗಳು ಯಥಾಸ್ಥಿತಿಗೆ ಮರಳಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ತಾತ್ಕಾಲಿಕ ದುರಸ್ತಿಯಿಂದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಲಚಗೆರೆ ಗ್ರಾಮಸ್ಥರು ಹಾಗೂ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!