ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

​ಸಾಧನೆಗೆ ಉತ್ತಮ ಗುರಿ ಹಾಗೂ ಏಕಾಗ್ರತೆ ಅವಶ್ಯ: ಶಾಸಕ ಭೀಮಸೇನ ಚಿಮ್ಮನಕಟ್ಟಿ

​ಬಾದಾಮಿ: ” ಉತ್ತಮ ಸಾಧನೆಗೆ ಭವಿಷ್ಯದಲ್ಲಿ ಉತ್ತಮ ಗುರಿ ಇಟ್ಟುಕೊಳ್ಳಬೇಕು. ಅಧ್ಯಯನ ಮಾಡುವಾಗ ಏಕಾಗ್ರತೆ ಎಷ್ಟು ಅವಶ್ಯವೋ, ಕ್ರೀಡೆಯಲ್ಲಿಯೂ ಅಷ್ಟೇ ಏಕಾಗ್ರತೆ ಮತ್ತು ತಾಳ್ಮೆ ಇರಬೇಕು ” ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

​ಬಾದಾಮಿಯ ಹೇಮರೆಡ್ಡಿ ಸಮುದಾಯ ಭವನದಲ್ಲಿ ಶುಕ್ರವಾರ, ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಚದುರಂಗ (ಚೆಸ್) ಸ್ಪರ್ಧೆ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
​ಕಾರ್ಯಕ್ರಮದಲ್ಲಿ ಬಾಗಲಕೋಟೆ ವಿ.ವಿ. ಯ ದೈಹಿಕ ಶಿಕ್ಷಣ ಸಂಯೋಜಕ ಕೆ.ಎಸ್. ಶಿರಹಟ್ಟಿ ಮಾತನಾಡಿ, “ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಶ್ವವಿದ್ಯಾಲಯ ಮಟ್ಟದ ಕ್ರೀಡೆಯನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಲ್ಲಿ ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಶಿಸ್ತು ಮತ್ತು ಸಾಧನೆಯ ಗುರಿಯನ್ನು ಹೊಂದಿರಬೇಕು” ಎಂದರು.
​ಅತಿಥಿಯಾಗಿ ಭಾಗವಹಿಸಿದ್ದ ಹುನಗುಂದ ಎಸ್.ಆರ್. ವಸ್ತ್ರದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಬಿ. ಚಳಗೇರಿ ಮಾತನಾಡಿ, “ಚದುರಂಗ ಸ್ಪರ್ಧೆಯಲ್ಲಿ ಪ್ರತಿಯೊಬ್ಬರಲ್ಲಿಯೂ ಗೆಲ್ಲುವ ಸಾಮರ್ಥ್ಯವಿದೆ. ವಿದ್ಯಾರ್ಥಿಗಳು ಛಲದಿಂದ ಗೆಲುವನ್ನು ಸಾಧಿಸಬೇಕು” ಎಂದು ಸಲಹೆ ನೀಡಿದರು.
​ಕಾಲೇಜಿನ ಪ್ರಾಚಾರ್ಯ ಪಾಟೀಲ ಶಿವಾನಂದ ರಾಯನಗೌಡರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಂಚನಮಾಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ್ ಹೆಗಡೆ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
​ಬಾಗಲಕೋಟೆ ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಪದವಿ ಕಾಲೇಜುಗಳಿಂದ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಚದುರಂಗ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!