ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊರಗುತ್ತಿಗೆ ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡಿ: ಶಾಸಕ ಜೆ.ಎನ್.ಗಣೇಶ್ ಅವರಿಗೆ ಮನವಿ

ಕಂಪ್ಲಿ ಪುರಸಭೆ ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಹಾಗೂ ನೇರ ಪಾವತಿ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ಜೆ.ಎನ್. ಗಣೇಶ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಮನವಿ ಸಲ್ಲಿಸಿದ ಬಳಿಕ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರ ಸಂಘದ ಸದಸ್ಯ ಟಿ. ರಂಗನಾಥ್ ಅವರು ಪತ್ರಿಕೆಯೊಂದಿಗೆ ಮಾತನಾಡಿದರು.
“ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕನಿಷ್ಠ ವೇತನ ಹಾಗೂ ಮೂಲಭೂತ ಸೌಕರ್ಯಗಳ ಅಡಿಯಲ್ಲಿ ಶ್ರಮಿಸುತ್ತಿರುವ ಹೊರಗುತ್ತಿಗೆ ನೀರು ಸರಬರಾಜು ನೌಕರರ ಬದುಕು ದುಸ್ತರವಾಗಿದೆ. ನೌಕರರ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ತುಮಕೂರಿನ ಶ್ರೀ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದವರೆಗೆ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಯಶಸ್ವಿಯಾಗಿದೆ” ಎಂದರು.
“ಪಾದಯಾತ್ರೆಯ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರು ನಮ್ಮ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದ್ದರಿಂದ ನಮ್ಮ ಕ್ಷೇತ್ರದ ಶಾಸಕರಾದ ಜೆ.ಎನ್. ಗಣೇಶ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿಗಳು ಹಾಗೂ ಪೌರಾಡಳಿತ ಸಚಿವರಿಗೆ ವಿಶೇಷ ಪತ್ರ ಬರೆಯುವ ಮೂಲಕ ಹೊರಗುತ್ತಿಗೆ ನೌಕರರ ನೇರ ನೇಮಕಾತಿ ಮತ್ತು ನೇರ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರಬೇಕು” ಎಂದು ಅವರು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಕೆ. ಸುನಿಲ್, ಹುಸೇನಪ್ಪ, ನಾಯಕರ ಭೀಮಪ್ಪ, ಚಂದ್ರಶೇಖರ, ಶಿವು, ಉಮೇಶ, ನಾಗರಾಜ, ಪರಶುರಾಮ ಸೇರಿದಂತೆ ಪುರಸಭೆಯ ನೌಕರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!