ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಆಸ್ಪತ್ರೆಗೆ ಡಿಎಚ್‌ಒ ದಿಢೀರ್ ಲಗ್ಗೆ: ಕರ್ತವ್ಯ ಲೋಪವೆಸಗಿದ ವೈದ್ಯರು, ಸಿಬ್ಬಂದಿಗೆ ಶೋಕಾಸ್ ನೋಟಿಸ್

ಕಂಪ್ಲಿ: ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್‌ಒ) ಡಾ. ಅಲಕನಂದಾ ಡಿ. ಮಾಳಗಿ ಭಾನುವಾರ ದಿಢೀರ್ ಭೇಟಿ ನೀಡಿ ಕಡತ ಹಾಗೂ ಸಿಬ್ಬಂದಿ ಕರ್ತವ್ಯದ ಪರಿಶೀಲನೆ ನಡೆಸಿದರು. ಕರ್ತವ್ಯ ಲೋಪ ತೋರಿದ ವೈದ್ಯರು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ, ಶೋಕಾಸ್ ನೋಟಿಸ್ ಜಾರಿಗೊಳಿಸಲು ಆದೇಶಿಸಿದ್ದಾರೆ.

ಘಟನೆಯ ಹಿನ್ನೆಲೆ :

ಶನಿವಾರ ರಾತ್ರಿ ಸ್ಥಳೀಯ ಶಾಸಕರಾದ ಜೆ.ಎನ್. ಗಣೇಶ್ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾಗ ವೈದ್ಯರು ಮತ್ತು ಸಿಬ್ಬಂದಿ ಗೈರುಹಾಜರಾಗಿರುವುದು ಕಂಡುಬಂದಿತ್ತು. ಅಲ್ಲದೆ, ಹಾಜರಾತಿ ಪುಸ್ತಕದಲ್ಲಿ ಮುಂಚಿತವಾಗಿಯೇ ರಜೆ ಹಾಕಿರುವುದು ಮತ್ತು ರೋಗಿಗಳಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂಬ ಸಾರ್ವಜನಿಕರ ದೂರುಗಳನ್ನು ಶಾಸಕರು ಡಿಎಚ್‌ಒ ಅವರ ಗಮನಕ್ಕೆ ತಂದಿದ್ದರು.

ಶಾಸಕರ ದೂರಿನ ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿದ ಡಿಎಚ್‌ಒ, ಆಸ್ಪತ್ರೆಯ ಹಾಜರಾತಿ ಪುಸ್ತಕ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಶಾಸಕರು ಬಂದಿದ್ದ ಸಮಯದಲ್ಲಿ ಆಯುಷ್ ವೈದ್ಯರು ಊಟಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದೃಢಪಟ್ಟಿದೆ. ಈ ಕರ್ತವ್ಯ ಲೋಪಕ್ಕಾಗಿ ಆಯುಷ್ ವೈದ್ಯ ಡಾ. ಮಲ್ಲೇಶಪ್ಪ ಅವರಿಗೆ ನೋಟಿಸ್ ನೀಡಲು ಹಾಗೂ ಆಸ್ಪತ್ರೆಯ ಉಳಿದ ವೈದ್ಯರು ಮತ್ತು ಸಿಬ್ಬಂದಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲು ಡಿಎಚ್‌ಒ ಸೂಚಿಸಿದರು.

“ಆಸ್ಪತ್ರೆಗೆ ಬಡ ರೋಗಿಗಳೇ ಹೆಚ್ಚಾಗಿ ಬರುತ್ತಾರೆ. 24/7 ಕರ್ತವ್ಯದಲ್ಲಿರುವ ವೈದ್ಯರು ಕಡ್ಡಾಯವಾಗಿ ಆಸ್ಪತ್ರೆಯಲ್ಲೇ ಇರಬೇಕು. ಸದ್ಯ ಹೆರಿಗೆ ಹಾಗೂ ಡಯಾಲಿಸಿಸ್ ವಿಭಾಗದಲ್ಲಿ ಉತ್ತಮ ಸೇವೆ ನಡೆಯುತ್ತಿದ್ದರೂ, ಕರ್ತವ್ಯದ ಅವಧಿಯಲ್ಲಿ ಸಿಬ್ಬಂದಿ ಹೊರಗಡೆ ಹೋಗುವಂತಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಬೇಜವಾಬ್ದಾರಿತನ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ಡಿಎಚ್‌ಒ ಡಾ. ಅಲಕಾನಂದ ಎಚ್ಚರಿಸಿದರು.
ಇದೇ ವೇಳೆ, ಶಾಸಕರ ಅಧ್ಯಕ್ಷತೆಯಲ್ಲಿ ಆರು ತಿಂಗಳಿಗೊಮ್ಮೆ ನಡೆಯಬೇಕಾಗಿದ್ದ ಎಕ್ಸಿಕ್ಯೂಟಿವ್ ಹಾಗೂ ಜನರಲ್ ಮೀಟಿಂಗ್‌ಗಳು ಬಾಕಿ ಉಳಿದಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಟಿಎಚ್‌ಒ ಡಾ. ಅರುಣ್‌ಕುಮಾರ್, ವೈದ್ಯರಾದ ಡಾ. ರವೀಂದ್ರ ಕನಿಕೇರಿ, ಡಾ. ಪ್ರಕಾಶ್ ಗೌಡ ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!