ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ನಾರಾ ಭರತ್‌ರೆಡ್ಡಿ ಜನ್ಮದಿನ: ಅಕ್ಕಮಹಾದೇವಿ ಕಂಚಿನ ಮೂರ್ತಿಗೆ ₹51 ಸಾವಿರ ದೇಣಿಗೆ

ಕಂಪ್ಲಿ: ಬಡವರ, ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಅವರು ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್ ಶ್ಲಾಘಿಸಿದರು.
ಪಟ್ಟಣದ ಸಾಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶಾಸಕ ನಾರಾ ಭರತ್‌ರೆಡ್ಡಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾಶಿವಶರಣೆ ಅಕ್ಕಮಹಾದೇವಿಯ ಕಂಚಿನ ಮೂರ್ತಿ ಸ್ಥಾಪನೆಗಾಗಿ ಹೊಸಕೋಟೆ ಜಗದೀಶ್ ನೇತೃತ್ವದಲ್ಲಿ ನಾರಾ ಭರತ್‌ರೆಡ್ಡಿ ಅಭಿಮಾನಿ ಬಳಗದಿಂದ ₹51,000 ಸಹಾಯಧನದ ದೇಣಿಗೆಯನ್ನು ಇದೇ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು.
ಬಳಿಕ ಮಾತನಾಡಿದ ಜಗದೀಶ್ ಅವರು, “ಕೊಡಗೈ ದಾನಿ, ಅಭಿವೃದ್ಧಿಯ ಹರಿಕಾರ ನಾರಾ ಸೂರ್ಯನಾರಾಯಣರೆಡ್ಡಿ ಅವರು ಕಂಪ್ಲಿ ಕ್ಷೇತ್ರಕ್ಕೆ ಶಾಸಕ ಗಣೇಶ್ ಅವರನ್ನು ತರುವ ಮೂಲಕ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದಾರೆ. ಅವರ ಹಾದಿಯಲ್ಲೇ ಸಾಗಿರುವ ನಾರಾ ಭರತ್‌ರೆಡ್ಡಿ ಅವರು ಬಳ್ಳಾರಿ ನಗರ ಸೇರಿದಂತೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜನಪರ ಸೇವೆ ಮಾಡುತ್ತಾ ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿದ್ದಾರೆ. ಅವರು ರಾಜಕೀಯ ಸೇರಿದಂತೆ ಪ್ರತಿಯೊಂದು ರಂಗದಲ್ಲೂ ದೊಡ್ಡ ಮಟ್ಟದಲ್ಲಿ ಬೆಳೆಯಲಿ. ಆ ದೇವರು ಅವರಿಗೆ ಆಯುಷ್ಯ, ಆರೋಗ್ಯ, ಸಮೃದ್ಧಿ ನೀಡಿ ಸಮಾಜ ಸೇವೆಗೆ ಇನ್ನಷ್ಟು ಶಕ್ತಿ ತುಂಬಲಿ” ಎಂದು ಹಾರೈಸಿದರು.
ಇದಕ್ಕೂ ಮುನ್ನ ಗಣ್ಯರು ಇಲ್ಲಿನ ಅಕ್ಕಮಹಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಡಾ. ಶಾರದಾ ಜಗನ್ನಾಥ ಹಿರೇಮಠ, ವೀರಶೈವ ಲಿಂಗಾಯತ ಮಹಾ ವೇದಿಕೆಯ ಕಂಪ್ಲಿ ತಾಲೂಕು ಅಧ್ಯಕ್ಷ ಬಳೇ ಮಲ್ಲಿಕಾರ್ಜುನ, ಮುಖಂಡರಾದ ಅರವಿ ಬಸವನಗೌಡ, ಡಾ. ಜಗನ್ನಾಥ ಹಿರೇಮಠ, ಕರೇಕಲ್ ಮನೋಹರ ಹಾಗೂ ಮಹಿಳಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!