ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶ 5 ಕುರಿ, 1 ಮೇಕೆ ಸಾವು!

₹2 ಲಕ್ಷಕ್ಕೂ ಅಧಿಕ ನಷ್ಟ; ಜೀವನಾಧಾರ ಕಳೆದುಕೊಂಡ ರೈತ ಮಹಿಳೆ ಕಣ್ಣೀರು

ಕೊರಟಗೆರೆ: ಕೆರೆಯ ಪಕ್ಕದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಐದು ಕುರಿ ಹಾಗೂ ಒಂದು ಮೇಕೆ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರವಲಯದ ಕೆರೆ ಬಳಿ ನಡೆದಿದೆ.
ಘಟನೆಯಲ್ಲಿ ₹2 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಜೀವನಾಧಾರವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡ ಬಡ ರೈತ ಮಹಿಳೆ ಕಣ್ಣೀರಿನಲ್ಲಿ ಮುಳುಗಿದ್ದಾರೆ.
ವಡ್ಡಗೆರೆ ತಾಂಡದ ರಾಜಣ್ಣ ಮತ್ತು ಕಮಲಮ್ಮ ದಂಪತಿಗೆ ಸೇರಿದ ಕುರಿ-ಮೇಕೆಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮಹಿಳೆಯೂ ವಿದ್ಯುತ್ ಸ್ಪರ್ಶಕ್ಕೆ ಸಿಲುಕುವ ಅಪಾಯ ಎದುರಾಗಿತ್ತು. ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ಸುಲೇಟರ್ ತುಂಡಾಗಿ ವಿದ್ಯುತ್ ತಂತಿ ನೆಲಕ್ಕೆ!
ಕೆರೆಯ ಪಕ್ಕದಲ್ಲಿದ್ದ ಜಮೀನಿನ ವಿದ್ಯುತ್ ಕಂಬದಲ್ಲಿನ ಪಿಂಗಾಣಿ ಇನ್ಸುಲೇಟರ್ ತುಂಡಾದ ಪರಿಣಾಮ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿತ್ತು ಎನ್ನಲಾಗಿದೆ. ಈ ಬಗ್ಗೆ ಅರಿವಿಲ್ಲದೆ ಜಮೀನಿನಲ್ಲಿ ಸಂಚರಿಸಿದ ಕುರಿ-ಮೇಕೆಗಳು ತಂತಿಯ ಸಂಪರ್ಕಕ್ಕೆ ಬಂದು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿವೆ. ಕಣ್ಣೆದುರೇ ತಮ್ಮ ಜೀವನಾಧಾರವಾಗಿದ್ದ ಜಾನುವಾರುಗಳು ಸಾವಿಗೀಡಾಗಿದ್ದನ್ನು ಕಂಡ ರೈತ ಮಹಿಳೆ ಕಮಲಮ್ಮ ದುಃಖತಪ್ತರಾಗಿದ್ದಾರೆ.
ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳ ಭೇಟಿ
ಘಟನೆ ತಿಳಿಯುತ್ತಿದ್ದಂತೆ ಕೊರಟಗೆರೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಬೆಸ್ಕಾಂ ಅಧಿಕಾರಿ ಮಲ್ಲಣ್ಣ, “ಇದು ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸುವ ಪ್ರೈಮರಿ ಲೈನ್ ಆಗಿದೆ. ವಿದ್ಯುತ್ ಕಂಬದಲ್ಲಿದ್ದ ಪಿಂಗಾಣಿ ಇನ್ಸುಲೇಟರ್ ತುಂಡಾಗಿರುವುದರಿಂದ ಈ ಘಟನೆ ಸಂಭವಿಸಿದೆ. ಈ ಕುರಿತು ಇಲಾಖೆಯ ಮೇಲಧಿಕಾರಿಗಳೊಂದಿಗೆ ಚರ್ಚಿಸಿ, ನೊಂದ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು” ಎಂದು ಭರವಸೆ ನೀಡಿದರು.
ಪರಿಹಾರಕ್ಕೆ ರೈತ ಕುಟುಂಬದ ನಿರೀಕ್ಷೆ
ಕುರಿ-ಮೇಕೆ ಸಾಕಾಣಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಬಡ ರೈತ ಕುಟುಂಬಕ್ಕೆ ಈ ಘಟನೆ ಆರ್ಥಿಕ ಸಂಕಷ್ಟ ತಂದೊಡ್ಡಿದೆ. ಈಗಾಗಲೇ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಕುಟುಂಬಕ್ಕೆ ಜಾನುವಾರುಗಳ ಸಾವು ಮತ್ತಷ್ಟು ಆಘಾತ ನೀಡಿದೆ.
ವಿದ್ಯುತ್ ತಂತಿಗಳ ನಿರ್ವಹಣೆ ಹಾಗೂ ಸುರಕ್ಷತೆಯ ಬಗ್ಗೆ ಸಂಬಂಧಪಟ್ಟ ಇಲಾಖೆ ಹೆಚ್ಚಿನ ಗಮನಹರಿಸಬೇಕು. ವಿದ್ಯುತ್ ಅವಘಡದಿಂದ ನಷ್ಟ ಅನುಭವಿಸಿರುವ ರೈತ ಕುಟುಂಬಕ್ಕೆ ವಿಳಂಬವಿಲ್ಲದೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!