ಸಿಂಗನಾಳ: ಮಹರ್ಷಿ ವಾಲ್ಮೀಕಿ ಜಯಂತಿಯಂದು ಎಸ್ಟಿ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ, ಸಿಂಗನಾಳ ಗ್ರಾಮದ ನಾಯಕ ಸಮಾಜದ ಎಲ್ಲ ಮುಖಂಡರು ಹಾಗೂ ಯುವಕರು ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಸಮುದಾಯದ ಬಹುದಿನಗಳ ಬೇಡಿಕೆಯಾಗಿರುವ ಶೇ. 7ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯ ಒದಗಿಸಬೇಕು. ಈ ಬೇಡಿಕೆಯನ್ನು ಈಡೇರಿಸುವಲ್ಲಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ವಾಲ್ಮೀಕಿ ಜಯಂತಿಯಂದು ಕಪ್ಪು ಬಟ್ಟೆ ಧರಿಸುವ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಾಯಕ ಸಮಾಜದ ಮುಖಂಡರು ಹಾಗೂ ಯುವಕರು ಭಾಗವಹಿಸಿ, ಮೀಸಲಾತಿ ಬೇಡಿಕೆಯನ್ನು ಶೀಘ್ರ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.




















