ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಕಾಲೋನಿಯಲ್ಲಿ ನಾಯಕ ಸಮಾಜದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, “ರಾವಣನ ಸೋಲಿಗೆ ತನ್ನ ಸಹೋದರ ವಿಭೀಷಣನ ಬೆಂಬಲ ಇಲ್ಲದಿರುವುದು ಒಂದು ಕಾರಣವಾದರೆ, ಯಾವುದೇ ಕಷ್ಟ ಎದುರಾದರೂ ಅಣ್ಣ ರಾಮನ ಬೆನ್ನಿಗೆ ನಿಂತ ಲಕ್ಷ್ಮಣನ ಸಹಕಾರ ರಾಮನ ಗೆಲುವಿಗೆ ಶಕ್ತಿಯಾಯಿತು” ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಡಾ. ಜಿ. ಪರಮೇಶ್ವರ್ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಮಾತನಾಡಿದ ಅವರು, ವೈದ್ಯರು ಯಾವುದೇ ತೊಂದರೆ ಇಲ್ಲವೆಂದು ತಿಳಿಸಿರುವುದು ಸಮಾಧಾನಕರ ಸಂಗತಿ. ಅವರು ಆದಷ್ಟು ಬೇಗ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ, ಕ್ಷೇತ್ರದ ಶಾಸಕರಾದ ಡಾ. ಜಿ. ಪರಮೇಶ್ವರ್ ಅವರು ಶೀಘ್ರವಾಗಿ ಗುಣಮುಖರಾಗಿ ಕ್ಷೇತ್ರದ ಜನರ ಸೇವೆ ಮುಂದುವರಿಸಲು ದೇವರು ಶಕ್ತಿ ನೀಡಲಿ ಎಂದು ಹಾರೈಸಿದರು.
ಮಧು ಅವರ ನೇತೃತ್ವದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಯಕ ಸಮಾಜದ ಮುಖಂಡರು, ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ




















