ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಧಾನ ಪರಿಷತ್ ಚುನಾವಣೆ: ಎನ್‌ಡಿಎ ಭರ್ಜರಿ ಗೆಲುವು : ಸಿರುಗುಪ್ಪದಲ್ಲಿ ಬಿಜೆಪಿ ವಿಜಯೋತ್ಸವ

ಸಿರುಗುಪ್ಪ : ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ, ಇಲ್ಲಿನ ನಗರದ ಪ್ರಮುಖ ರಸ್ತೆಗಳಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತಾಲೂಕು ಮಂಡಲದ ವತಿಯಿಂದ ಇತ್ತೀಚೆಗೆ ಭವ್ಯ ವಿಜಯೋತ್ಸವ ಆಚರಿಸಲಾಯಿತು.
ಚುನಾವಣೆಯಲ್ಲಿ ಜಯಶೀಲರಾದ ಮೈತ್ರಿಕೂಟದ ಅಭ್ಯರ್ಥಿಗಳಾದ ಶ್ರೀ ಎಸ್. ವಿ. ಸಂಕನೂರು, ಶ್ರೀ ಕೆ. ಎಂ. ಸುರೇಶ, ಶ್ರೀ ಶಶೀಲ್ ನಮೋಶಿ ಹಾಗೂ ಶ್ರೀ ಎ. ಪಿ. ರಂಗನಾಥ್ ಅವರಿಗೆ ಜಿಲ್ಲೆಯ ಮುಖಂಡರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.
ನಗರದ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ಪಕ್ಷದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಜಯಘೋಷ ಕೂಗುತ್ತಾ ವಿಜಯದ ಸಂಭ್ರಮವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಅವರು, “ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು ಕಾರ್ಯಕರ್ತರ ಶ್ರಮ ಹಾಗೂ ಸರ್ಕಾರದ ಜನಪರ ನೀತಿಗಳಿಗೆ ಸಂದ ಜಯವಾಗಿದೆ” ಎಂದರು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೀರನಗೌಡರು ಮಾತನಾಡಿ, ಈ ಫಲಿತಾಂಶವು ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖ ಮುಖಂಡರಾದ ಎಂ. ಎಸ್. ಸಿದ್ದಪ್ಪ (ತೆಕ್ಕಲಕೋಟೆ), ನಗರಸಭೆ ಸದಸ್ಯರಾದ ಮೇಕೆಲಿ ವೀರೇಶ್, ಮೋಹನ್ ರೆಡ್ಡಿ, ನಟರಾಜ್, ರಾಮಕೃಷ್ಣ ಬಿ.ಇ., ಅವಿನಾಶ್, ಚಾಗಿಸುಬ್ಬಯ್ಯ ಬಿ.ಇ., ಮಧು, ಸದಾಶಿವ, ಶೇಖರ್ ಗೌಡ ಮಂಡರಿಗೆ, ಕೃಷ್ಣ, ಮುದಿಯಪ್ಪ, ಜಬಿವುಲ್ಲಾ, ರಾಮಕೃಷ್ಣ ಉಪಸ್ಥಿತರಿದ್ದರು.
ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಮಾರೇಶ್, ಗಂಗಾಧರ್, ಶೇಖಪ್ಪ, ಶಿವಕುಮಾರ್, ದೊಡ್ಡನಗೌಡ, ಬಸವರಾಜ್ ಸೇರಿದಂತೆ ಪದಾಧಿಕಾರಿಗಳು, ಯುವ ಮೋರ್ಚಾ ಕಾರ್ಯಕರ್ತರು ಹಾಗೂ ಪಕ್ಷದ ಸಕ್ರಿಯ ಕಾರ್ಯಕರ್ತರು ವಿಜಯೋತ್ಸವದ ಮುಂಚೂಣಿಯಲ್ಲಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!