ಕಂಪ್ಲಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಅಳ್ಳಳ್ಳಿ ವೀರೇಶ್, “ವಿಧಾನ ಪರಿಷತ್ ಚುನಾವಣೆಯ ಈ ಗೆಲುವು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಮೇಲೂ ಸಕಾರಾತ್ಮಕ ಪ್ರಭಾವ ಬೀರಲಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತಕ್ಕೆ ಸಿಕ್ಕ ಜಯ ಇದಾಗಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಂಪ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ್ ಮಾತನಾಡಿ, “ರಾಜ್ಯದಲ್ಲಿ ಮುಂಬರುವ ಚುನಾವಣೆಗಳಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷವನ್ನು ಸಂಘಟಿಸಿ, ಮರಳಿ ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು,” 2028ಕ್ಕೆ ನಮ್ಮದೇ ಗೆಲುವು ಎಂದರು.
ಬಿಜೆಪಿ ಮುಖಂಡರಾದ ಬಿಎಲ್ಎಲ್ಎಂ ಗೋಕರ್ಣ ಶ್ರೀನಿವಾಸ್, ವೈ. ಮುರುಳಿಮೋಹನರೆಡ್ಡಿ, ಮಹಿಳಾ ಘಟಕದ ಟಿ. ರಬಿಯಾ ನಿಸಾರ್, ಪ್ರಮುಖರಾದ ಜಿ. ಶ್ರೀನಿವಾಸ್, ಜಿ.ಜೆ. ಚಂದ್ರಣ್ಣ, ಅಗಳಿ ಪಂಪಾಪತಿ, ಉಗಾದಿ ಶಿವರಾಜ್, ಬಿ. ದೇವೇಂದ್ರ, ಬಿ. ರಮೇಶ್, ಪ್ರಶಾಂತ್, ರಾಜು, ಸಿ.ಎ. ಚನ್ನಪರಂಗಸ್ವಾಮಿ, ಬಡಿಗೇರ್ ವೀರೇಶ್, ಮನೋಜ್‌ಗೌಡ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂಜ ಕಾರ್ಯಕರ್ತರು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















