ಶಿವಮೊಗ್ಗ : ನಗರದ ಕೋಟೆ ಯುವಕರ ಸಂಘದ ಆಶ್ರಯದಲ್ಲಿ ನಡೆದ ಅದ್ದೂರಿ ಕನ್ನಡ ರಾಜ್ಯೋತ್ಸವವು ಕೋಟೆ ಯುವಕರ ಸಂಘದ ಅಧ್ಯಕ್ಷರಾದ ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂಧರ್ಭದಲ್ಲಿ ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಧ್ವಜಾರೋಹಣ ನೆರವೇರಿಸಿದರಲ್ಲದೆ ಕುಂಸಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ನಾಗರಾಜ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಸಂಘದ ಹಿರಿಯ ಸದಸ್ಯರಾದ ಶ್ರೀ ದೀನದಯಾಳುಜಿರವರು ದಿಕ್ಸೂಚಿ ಭಾಷಣ ಮಾಡಿದರು.
ಅರಮನೆ ವಾರ್ಡಿನ ನಿಕಟ ಅಪೂರ್ವ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಅವರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಮೈಸೂರು.


















