ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆ ಬದಿಯಲ್ಲಿ ಮರಗಳಂತೆ ಬೆಳೆದ ಗಿಡಗಳು..!

ಕಣ್ಮುಚ್ಚಿ ಕುಳಿತಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..?

ಮುಖ್ಯರಸ್ತೆಯಲ್ಲಿ ವಾಹನ ಸವಾರರ ಪರದಾಟ | ಅಪಘಾತದ ಭೀತಿ ಹೆಚ್ಚಳ.

ಕೊರಟಗೆರೆ: ತುಮಕೂರು–ಪಾವಗಡ ಮುಖ್ಯರಸ್ತೆಯ ಕೊರಟಗೆರೆ ತಾಲೂಕು ವ್ಯಾಪ್ತಿಯ ಸುಮಾರು ಒಂದರಿಂದ ಎರಡು ಕಿಲೋಮೀಟರ್ ಉದ್ದದ ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಂಟಿಗಳು ಮರಗಳಂತೆ ಬೆಳೆದು ನಿಂತಿದ್ದು, ವಾಹನ ಸವಾರರಿಗೆ ಸಂಚಾರ ಮಾಡಲು ತೀವ್ರ ತೊಂದರೆಯಾಗುತ್ತಿದೆ.

ಹೌದು.. ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳಿಂದಾಗಿ ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣಿಸದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ವಾಹನಗಳು ಪರಸ್ಪರ ಎದುರುಬದುರಾಗಿ ಬಂದಾಗ ರಸ್ತೆಯಲ್ಲಿ ಸಂಚರಿಸುವ ಸವಾರರು ಸಾಕಷ್ಟು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಇನ್ನು ರಸ್ತೆ ಬದಿಯ ಗಿಡಗಂಟಿಗಳಿಂದಾಗಿ ಎದುರಿನಿಂದ ಬರುವ ವಾಹನಗಳು ಕಾಣಿಸದೆ ಅಪಘಾತಗಳು ಸಂಭವಿಸುವ ಆತಂಕ ವಾಹನ ಸವಾರರನ್ನು ಕಾಡುತ್ತಿದೆ. ಪ್ರಮುಖ ಮುಖ್ಯರಸ್ತೆಯಾಗಿರುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದರೂ, ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ವಾಹನ ಸವಾರರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!