ಬೀದರ್ : ದಿನಾಂಕ 30/10/26 ರಂದು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ಬೀದರ್ ನಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿವಾಸಿಯಾದ ಶ್ರೀ ವತ್ಸರಾಜು H.r. ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರು ಪ್ರತಿಷ್ಠಾನ ಸಂಸ್ಥೆಯಾದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣವನ್ನು ಪಡೆದು ಸಂಸ್ಥೆಗೆ ಮತ್ತು ದೊಡ್ಡಬಳ್ಳಾಪುರಕ್ಕೆ ಕೀರ್ತಿಯನ್ನು ತಂದು ಕೊಟ್ಟಿರುತ್ತಾರೆ ಇವರಿಗೆ ಮಾನ್ಯ ಶಾಸಕರಾದ ಧೀರಜ್ ಮುನಿರಾಜು ಹಾಗೂ ಯೋಗ ಶಿಕ್ಷಕಿಯಾದ ನಿರ್ಮಲ ಶುಭಾಶರವರು ಹಾಗೂ ಯೋಗ ಗುರುಗಳಾದ ಯೋಗ ನಟರಾಜ್ ರವರು ಶುಭಾಶಯ ಕೋರಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
/ ಮೈಸೂರು




















