ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಶಾಲನಗರದ ಬೈಕ್ ಶೋರೂಮಿನ ನಾಮ ಫಲಕದಲ್ಲಿ ಕನ್ನಡ ಕಡೆಗಣನೆ : ಕ.ರ.ವೇ.ಆಕ್ರೋಶ , ದಂಡ ಪಾವತಿ.

ಕುಶಾಲನಗರ : ಮಡಿಕೇರಿ ಹೆದ್ದಾರಿಯ ಬೈಚನಹಳ್ಳಿಯ ಸಮೀಪದಲ್ಲಿರುವ ರಾಯಲ್ ಎನ್ ಫೀಲ್ಡ್ ಬೈಕ್ ಶೋರೂಮಿನ ನಾಮಫಲಕದಲ್ಲಿ ಕೇವಲ ಕನ್ನಡ ಶೇಕಡ ೫% ಹಾಗೂ ಆಂಗ್ಲ ಭಾಷೆ ೯೫% ಭಾಗದಷ್ಟು ಇರುವುದನ್ನು ಅರಿತ ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶೋರುಮಿನ ಸಂಬಂಧಪಟ್ಟವರನ್ನು ವಿಚಾರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಪುರಸಭೆಯ ಮುಖ್ಯ ಅಧಿಕಾರಿಗಳನ್ನು ಸ್ಥಳಕ್ಕೆ ಭೇಟಿ ನೀಡುವಂತೆ ಒತ್ತಾಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಧಿಕಾರಿಯವರು ಮಾಡಿದ ತಪ್ಪಿಗೆ 2000ರೂ ದಂಡವನ್ನು ಹಾಕಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇದೇ ರೀತಿ ಆಂಗ್ಲ ಭಾಷೆಯ ನಾಮಫಲಕವನ್ನು ಹಾಕಿದಲ್ಲಿ ದೊಡ್ಡ ಮೊತ್ತದ ದಂಡವನ್ನು ಹಾಕುವುದಾಗಿ ಪುರಸಭೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಕ.ರವೇ.ಶಿವರಾಮೆಗೌಡರ ಬಣದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಕೆ.ಚಂದ್ರು, ಪುಟ್ಟಮ್ಮ ಮಹಿಳಾ ತಾಲ್ಲೂಕು ಗೌರವಾಧ್ಯಕ್ಷರು,
ಪುಟ್ಟಸ್ವಾಮಿ ತಾಲ್ಲೂಕು ಅಧ್ಯಕ್ಷರು, ರಂಗಸ್ವಾಮಿ ತಾಲ್ಲೂಕು ಉಪಾಧ್ಯಕ್ಷರು,
ನಾಗರಾಜ್ ಜಿಲ್ಲಾ ಗೌರವ ಅಧ್ಯಕ್ಷರು, ಸದಸ್ಯ
ಕಾರ್ತಿಕ್ ಮುಂತಾದವರು ಭಾಗವಹಿಸಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!