ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್.ಆರ್. ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ಮತ್ತೊಂದು ಮೈಲಿಗಲ್ಲು

11 ವಿಭಾಗಗಳ 42 PG ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ

​ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್.ಆರ್. ಪಾಟೀಲ್ ಶಿಕ್ಷಣ ಪ್ರತಿಷ್ಠಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಎಸ್.ಆರ್. ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ’ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಸಂಸ್ಥೆಯು 2026–27ನೇ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 11 ವಿಭಾಗಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ (PG) ಕೋರ್ಸ್‌ಗಳನ್ನು ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಅಧಿಕೃತ ಅನುಮೋದನೆ ಪಡೆದುಕೊಂಡಿದೆ., ಎಂದು ಮಾಜಿ ಸಚಿವ ಎಸ್ ಆರ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಈ ನೂತನ ಅನುಮೋದನೆಯೊಂದಿಗೆ ಸಂಸ್ಥೆಗೆ ಒಟ್ಟು 42 ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಇದು ಮಹಾವಿದ್ಯಾಲಯದ ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಹೆಜ್ಜೆಯಾಗಿದೆ.

​ಅನುಮೋದನೆ ಪಡೆದ ಸ್ನಾತಕೋತ್ತರ (PG) ಕೋರ್ಸ್‌ಗಳು ಮತ್ತು ಸೀಟುಗಳ ವಿವರ :

​M.D. ಅನಾಟಮಿ: 04 ಸೀಟುಗಳು
​M.D. ಫಿಸಿಯಾಲಜಿ: 04 ಸೀಟುಗಳು
​M.D. ಬಯೋಕೆಮಿಸ್ಟ್ರಿ: 04 ಸೀಟುಗಳು
​M.D. ಫಾರ್ಮಕಾಲಜಿ: 04 ಸೀಟುಗಳು
​M.D. ಮೈಕ್ರೋಬಯಾಲಜಿ: 02 ಸೀಟುಗಳು
​M.D. ಕಮ್ಯುನಿಟಿ ಮೆಡಿಸಿನ್: 04 ಸೀಟುಗಳು
​M.D. ಜನರಲ್ ಮೆಡಿಸಿನ್: 04 ಸೀಟುಗಳು
​M.D. ಡರ್ಮಟಾಲಜಿ (ಚರ್ಮ ರೋಗ ವಿಭಾಗ): 04 ಸೀಟುಗಳು
​M.S. ಜನರಲ್ ಸರ್ಜರಿ: 04 ಸೀಟುಗಳು
​M.D. ರೇಡಿಯಾಲಜಿ: 04 ಸೀಟುಗಳು
​M.S. OBG (ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗ): 04 ಸೀಟುಗಳು
​ಗುಣಮಟ್ಟದ ವೈದ್ಯಕೀಯ ಶಿಕ್ಷಣ, ಅತ್ಯಾಧುನಿಕ ರೋಗನಿರ್ಣಯ ಮತ್ತು ಆರೋಗ್ಯ ಸೇವಾ ಸೌಲಭ್ಯಗಳು ಹಾಗೂ ಪರಿಣಿತ ವೈದ್ಯ-ಬೋಧಕ ವರ್ಗದ ನಿರಂತರ ಶ್ರಮದಿಂದ ಸಂಸ್ಥೆಗೆ ಈ ಮನ್ನಣೆ ದೊರೆತಿದೆ. ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ವೈದ್ಯಕೀಯ ಶಿಕ್ಷಣ ತಲುಪಿಸುವಲ್ಲಿ ಮತ್ತು ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಲ್ಲಿ ಈ ಹೊಸ ಕೋರ್ಸ್‌ಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!