ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒತ್ತಡ ಮುಕ್ತ ಕಲಿಕೆಗೆ ಆನಂದದಾಯಕ ಹಬ್ಬ: ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದ ಪ್ರತಿಭೆ ಕಾರಂಜಿ’

ಕಂಪ್ಲಿ: ‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿಯೇ ಸರ್ಕಾರ ಹಮ್ಮಿಕೊಂಡಿರುವ ‘ಕಲಿಕಾ ಹಬ್ಬ’ವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಲು ಮತ್ತು ಆನಂದದಾಯಕವಾಗಿ ಕಲಿಯಲು ಅತ್ಯಂತ ಪೂರಕವಾಗಿದೆ’ ಎಂದು ಎಸ್‌ಡಿಎಂಸಿ ಅಧ್ಯಕ್ಷ ರಾಮಲಿಂಗಪ್ಪ ತಿಳಿಸಿದರು.
ಪಟ್ಟಣದ 21ನೇ ವಾರ್ಡ್‌ನ ಸಕ್ಕರೆ ಕಾರ್ಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ‘ಪ್ರತಿಭೆ ಕಾರಂಜಿ’ ಹಾಗೂ ‘ಕಲಿಕಾ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸೃಜನಶೀಲ ವಾತಾವರಣವು ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದರು.
ಆಟೋಟದ ಮೂಲಕ ಶೈಕ್ಷಣಿಕ ಪ್ರಗತಿ:
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಸಿಆರ್‌ಪಿ ಕರುಣಾಕರ ಆಚಾರ್ ಅವರು, “ಕಲಿಕಾ ಬೋಧನೆಯ ಜೊತೆಗೆ ಆಟೋಟ ಹಾಗೂ ವೈವಿಧ್ಯಮಯ ಚಟುವಟಿಕೆಗಳ ಮೂಲಕ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಸುಧಾರಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಹಬ್ಬವು ಮಕ್ಕಳಿಗೆ ಯಾವುದೇ ಹೊರೆ ಅಥವಾ ಒತ್ತಡವನ್ನು ಉಂಟುಮಾಡುವುದಿಲ್ಲ. ಬದಲಿಗೆ ಆನಂದದಾಯಕ ಚಟುವಟಿಕೆಗಳ ಮೂಲಕ ಮಕ್ಕಳಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ” ಎಂದು ವಿವರಿಸಿದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಶಿಕ್ಷಣದ ಮೇಲಿನ ಆಸಕ್ತಿಯನ್ನು ಹೆಚ್ಚಿಸಲು ಇಂತಹ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ವಿವಿಧ ಕಲಿಕೋತ್ಸವ ಪ್ರದರ್ಶನಗಳನ್ನು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜ, ಈಸಿಟಿ ರೇವಣ್ಣ, ಸಿಆರ್‌ಪಿಗಳಾದ ರೇಣುಕಾರಾಧ್ಯ, ಭೂಮೇಶ್, ಪ್ರಭಾಕರ್, ಮುಖಂಡರಾದ ಚಂದ್ರಶೇಖರ್, ಆದಿನಾರಾಯಣ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!