ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿರೇಮಳಗಾವಿ : ಮಕ್ಕಳ ದಿನಾಚರಣೆ ಸಂಭ್ರಮ

ಬಾಗಲಕೋಟೆ/ ಹಿರೇಮಳಗಾವಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಿರೇಮಳಗಾವಿಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರು ಆಗಿರುವ ಶ್ರೀಮತಿ ಬಿ ಬಿ ದೇವದುರ್ಗ ಮೇಡಂ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೂಡಲಸಂಗಮ ಸಮೂಹ ಸಂಪನ್ಮೂಲ ವ್ಯಕ್ತಿಗಳಾಗಿರುವ ಶ್ರೀ ಜಿ ಹೆಚ್ ಗೌಡರ ಮತ್ತು ಹುನಗುಂದ ಸಮೂಹ ಸಂಪನ್ಮೂಲ ವ್ಯಕ್ತಿಗಳಾಗಿರುವ ಶ್ರೀ ಎಂ ಹೆಚ್ ಪೂಜಾರಿ ಅವರು ಉಪಸ್ಥಿತರಿದ್ದರು. ಹಿರಿಯ ಶಿಕ್ಷಕರಾದ ಶ್ರೀ ಬಿ ಎಂ ಅಂಗಡಿ, ಗಣಿತ ಶಿಕ್ಷಕರಾಗಿರುವ ಶ್ರೀ ಮುತ್ತು ಯ.ವಡ್ಡರ, ಸಮಾಜ ಶಿಕ್ಷಕರಾಗಿರುವ ಶ್ರೀ ಎಚ್ ಬಿ ಮಾದರ ಹಾಗೂ ಗೌರವ ಶಿಕ್ಷಕಿಯರಾಗಿರುವ ಶ್ರೀಮತಿ ಸಂಗಮ್ಮ ಎಂ. ಸೂಳಿಭಾವಿ ಭಾಗವಹಿಸಿದ್ದರು. ಮೊದಲಿಗೆ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಹಾಡು, ನೃತ್ಯ, ಭಾಷಣ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಿಕ್ಷಕರು ಕೂಡ ಮಕ್ಕಳೊಂದಿಗೆ ಸೇರಿ ಹಾಡು, ನೃತ್ಯ ಹಾಗೂ ಹಾಸ್ಯ ಕಾರ್ಯಕ್ರಮಗಳನ್ನು ನೀಡಿ ಮಕ್ಕಳನ್ನು ರಂಜಿಸಿದರು.

ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದ ಮುಖ್ಯ ಶಿಕ್ಷಕರು, “ಮಕ್ಕಳೇ ದೇಶದ ಭವಿಷ್ಯ. ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿ. ಮಕ್ಕಳು ವಿದ್ಯೆಯ ಜೊತೆಗೆ ಸಂಸ್ಕಾರ, ಶಿಸ್ತು, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು” ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಎಲ್ಲಾ ಮಕ್ಕಳಿಗೂ ಸಿಹಿ ಹಂಚಲಾಯಿತು.

ಕೊನೆಯಲ್ಲಿ ಶಿಕ್ಷಕರು ಮಕ್ಕಳಿಗೆ ಶುಭ ಹಾರೈಸಿ, ಮಕ್ಕಳ ದಿನಾಚರಣೆಯ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಯವರು,ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!