ಮಾಹಿತಿ ಹಕ್ಕು ಹೋರಾಟಗಾರರಾದ ಹೇಮಂತ ನಾಗರಾಜ್ ಹುಟ್ಟುಹಬ್ಬದ ಅಂಗವಾಗಿ
ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಪೆನ್ ಹಾಗೂ ಸಿಹಿ ವಿತರಣೆ.
ಕೊಪ್ಪಳ: ಕಾರಟಗಿ ತಾಲೂಕಿನ ಹುಟ್ಟುಹಬ್ಬವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸುವುದು ಇಂದಿನ ದಿನಗಳಲ್ಲಿ ಉತ್ತಮ ಬೆಳವಣಿಗೆಯಾಗಿದೆ. ಇಂತಹ ಮಾದರಿ ಕಾರ್ಯಕ್ಕೆ ಸಾಕ್ಷಿಯಾಗಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯ ಅಧ್ಯಕ್ಷರಾದ ಹೇಮಂತ ನಾಗರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ಹಾಗೂ ಸಿಹಿ ವಿತರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ ಪಿ. ಶಿವನಾರಾಯಣ ಅವರ ನೇತೃತ್ವದಲ್ಲಿ ಕೊಪ್ಪಳದ ಮಾರುತಿ ಕ್ಯಾಂಪ್ (ಮಾರುತಿ ನಗರ) ಮತ್ತು ಕಿಂಧಿಕ್ಯಾಂಪ್ನ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ನುಗಳು ಹಾಗೂ ಸಿಹಿ ವಿತರಿಸಲಾಯಿತು.




















