ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಡವರ ಪಾಲಿಗೆ ಆಶಾಕಿರಣವಾಗಲಿರುವ ಉಚಿತ ಕಣ್ಣಿನ ಆಸ್ಪತ್ರೆ ಶೀಘ್ರ ಉದ್ಘಾಟನೆ : ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಸಂಪನ್ನ

ಕಂಪ್ಲಿ: ಸ್ಥಳೀಯ ಚಿಕ್ಕೇನಕೊಪ್ಪ ಚೆನ್ನವೀರ ತಾತ ಶರಣರ ಬಳಗದ ವತಿಯಿಂದ ಬಡ ಮತ್ತು ಅಶಕ್ತ ಜನರ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಉಚಿತ ಕಣ್ಣಿನ ಆಸ್ಪತ್ರೆಯು ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ.
ಆಸ್ಪತ್ರೆಯ ಉದ್ಘಾಟನೆಯ ಪೂರ್ವಭಾವಿಯಾಗಿ ಭಾನುವಾರದಂದು ವಾಸ್ತು ಶಾಂತಿ ಹಾಗೂ ನವಗ್ರಹ ಶಾಂತಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು.
ಬಳಗಾನೂರು ಶಿವಶಾಂತವೀರ ಶರಣರ ದಿವ್ಯ ನೇತೃತ್ವದಲ್ಲಿ ಈ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಬಳಿಕ ಆಶೀರ್ವಚನ ನೀಡಿದ ಅವರು, “ಆರ್ಥಿಕವಾಗಿ ಹಿಂದುಳಿದ ಬಡ ಜನರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ನಡೆಸುವುದರ ಜೊತೆಗೆ, ಸುಸಜ್ಜಿತ ಆಸ್ಪತ್ರೆಯನ್ನು ತೆರೆದು ಉಚಿತ ಶಸ್ತ್ರಚಿಕಿತ್ಸೆ ನೀಡುತ್ತಿರುವುದು ನಿಜಕ್ಕೂ ಹೆಮ್ಮೆಯ ಮತ್ತು ಶ್ಲಾಘನೀಯ ಕಾರ್ಯ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು,” ಎಂದು ಕರೆ ನೀಡಿದರು.
ಸಾಂಗತ್ರಯ ಸಂಸ್ಕೃತ ಪಾಠಶಾಲೆಯ ಗೌರವ ಪ್ರಾಂಶುಪಾಲ ಶಶಿಧರ ಶಾಸ್ತ್ರಿ ಹಾಗೂ ಅವರ ಶಿಷ್ಯವೃಂದದ ಪೌರೋಹಿತ್ಯದಲ್ಲಿ ಹೋಮ-ಹವನಾದಿ ಪೂಜಾ ಕೈಂಕರ್ಯಗಳು ನೆರವೇರಿದವು.

ಈ ಸಂದರ್ಭದಲ್ಲಿ ಮಾತನಾಡಿದ ಬಳಗದ ಕಾರ್ಯದರ್ಶಿ ಡಾ. ಜಂಬುನಾಥಗೌಡ ಅವರು, “ಆಸ್ಪತ್ರೆಯ ಕಟ್ಟಡ ಕಾಮಗಾರಿಯು ಈಗಾಗಲೇ ಸಂಪೂರ್ಣಗೊಂಡಿದೆ. ಶಸ್ತ್ರಚಿಕಿತ್ಸೆಗೆ ಅಗತ್ಯವಿರುವ ಆಧುನಿಕ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು. ಶೀಘ್ರದಲ್ಲೇ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಹಸ್ತದಿಂದ ನೂತನ ಆಸ್ಪತ್ರೆಯನ್ನು ಉದ್ಘಾಟಿಸಲಾಗುವುದು,” ಎಂದು ಮಾಹಿತಿ ನೀಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!