ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಖುರ್ರತ್ತುಸ್ಸಾದಾತ್ ಮದರಸದಲ್ಲಿ ಕನ್ನಡಂಗಳ್ ಕಾರ್ಯಕ್ರಮ

ಸಿರುಗುಪ್ಪ / ಮುದ್ದಟನೂರ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಖುರ್ರತ್ತುಸ್ಸಾದಾತ್ ಸುನ್ನೀ ಮದರಸ ಮುದ್ದಟನೂರಿನಲ್ಲಿ ಕನ್ನಡಂಗಳ್ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತು. ಕಾರ್ಯಕ್ರಮವನ್ನು ಐ.ಯಿ.ಬಿ ಮುಫತ್ತಿಶ್ ಉಸ್ತಾದ್ ಖಲಂದರ್ ಸಖಾಫಿ ಅಲ್ ಹಿಕಮಿ ಉದ್ಘಾಟಿಸಿದರು. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಜಗತ್ತಿನ ಶ್ರೇಷ್ಠ ಮತ್ತು ಶ್ರೀಮಂತ ಭಾಷೆಗಳ ಪೈಕಿ ಕನ್ನಡಕ್ಕೆ ವಿಶೇಷ ಸ್ಥಾನವಿದೆ. ಐತಿಹಾಸಿಕ ಚಾರಿತ್ರಿಕ ಹಿನ್ನೆಲೆಯಿರುವ ಕನ್ನಡವು ಸಾಹಿತ್ಯ ಕ್ಷೇತ್ರದಲ್ಲೂ ಜಗತ್ತಿಗೆ ಮಾದರಿಯಾಗಿದೆ. ನವ ತಲೆಮಾರಿನ ಯುವಜನಾಂಗ ಅದನ್ನು ಓದುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕೆಂದು ಅಭಿಪ್ರಾಯಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ವಿಜೇತರಾದ ಮಯೂರವರ್ಮ ಹಾಗೂ ನೃಪತುಂಗ ಎಂಬ ತಂಡಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಮದರಸ ಮುಖ್ಯಸ್ಥ ಆಮಿರ್ ಅಶ್ಅರೀ ಬನ್ನೂರು, ಹಿರಿಯರಾದ ಹುಸೈನ್ ಸಾಬ್, ಹೊನ್ನೂರು ಸಾಬ್, ರಹ್ಮತುಲ್ಲ ಸಾಬ್, ನಬಿರಸೂಲ್, ಮಾಬುಸುಬಾನಿ, ಶೇಕ್ಷಾವಲಿ, ಸುಬಾನ್ ಸಾಬ್, ಕಾಸಿಂ ಸಾಬ್, ಯಮನೂರ್, ಸರ್ವರ್ ಹುಸೈನ್ ಹಾಗೂ ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!