ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಗ್ರಾಮ ಘಟಕಗಳ ನೂತನ ನಾಮಫಲಕಗಳ ಉದ್ಘಾಟನೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕುಂಪಿ ಹಾಗು ಲಿಂಗದಹಳ್ಳಿ ಗ್ರಾಮದಲ್ಲಿ ದಿ. 20-11-2026 ರಂದು ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕ ಸಂಘದ ವತಿಯಿಂದ ನೂತನ ಗ್ರಾಮ ಘಟಕಗಳ ನೂತನ ನಾಮಫಲಕಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಗಂಗಾವತಿ ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ಶ್ರೀ ಎಂ. ಅಶೋಕ್ ಅವರು ಉಪಸ್ಥಿತರಿದ್ದು ಹಾಗೆ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಸಂಘದ ಸಂಘದ ಇತರ ಸದಸ್ಯರುಗಳಿಂದ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಒಂದು ಸಂಘಟನೆ ಜವಾಬ್ದಾರಿಯುತವಾಗಿ ಕಾರ್ಮಿಕರಿಗೆ ಮಾರ್ಗದರ್ಶನವನ್ನು ನೀಡುವುದರ ಮುಖಾಂತರ ಅಗತ್ಯ ಸೌಲಭ್ಯಗಳನ್ನು ಕಾರ್ಮಿಕರಿಗೆ ದೊರಕಿಸುವುದು ಇದರ ಉದ್ದೇಶ ಎಂಬುದನ್ನು ತಿಳಿಸಲಾಯಿತು.
ಹಾಗೆಯೇ ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳನ್ನು ಚೆಕ್ಕುಗಳನ್ನು ಕಾರ್ಮಿಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಕ್ಕುಂಪಿ ಹಾಗೂ ಲಿಂಗದಹಳ್ಳಿ ಗ್ರಾಮದಲ್ಲಿ ಗ್ರಾಮ ಘಟಕಗಳನ್ನು ಕಾರ್ಮಿಕರ ಸಮ್ಮುಖದಲ್ಲಿ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮ ಘಟಕಗಳನ್ನು ಯಶಸ್ವಿಯಾಗಿ ಪ್ರಾರಂಭಿಸಲಾಯಿತು.
ಈ ಒಂದು ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷರಾದ ರುದ್ರಪ್ಪ ಹಣವಾಳ ಹಾಗೂ ಸಂಘದ ಸದಸ್ಯರು ಹಾಗೂ ಗ್ರಾಮದ,ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!