ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸತ್ಯದ ಪರ ಧ್ವನಿ ಎತ್ತಿ, ಶಿಸ್ತಿನ ವಕೀಲರಾಗಿ : ನ್ಯಾಯಾಧೀಶ ನಾಗೇಶ್ ಪಾಟೀಲ್ ಕರೆ.

ಗಂಗಾವತಿ: ತಾಲೂಕಿನ ಮರಳಿಯ ಎಂ. ಎಸ್. ಎಂ. ಎಸ್. ಕಾನೂನು ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ‘ಅಭ್ಯುದಯ’ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸತ್ಯದ ಪರ ಧ್ವನಿ ಎತ್ತುವ ಧೈರ್ಯ ಬೆಳೆಸಿಕೊಂಡು, ಶಿಸ್ತು, ಉತ್ತಮ ನಡವಳಿಕೆ ಹಾಗೂ ಸೇವಾ ಮನೋಭಾವದೊಂದಿಗೆ ಸಮಾಜಕ್ಕೆ ನ್ಯಾಯ ಒದಗಿಸುವ ವಕೀಲರಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ನಾಗೇಶ ಪಾಟೀಲ್ ಹೇಳಿದರು.

ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಮಂಜುನಾಥ ಶಿವಲಿಂಗಪ್ಪ ಮಾತನಾಡಿ, ಪತ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರೊಂದಿಗೆ ಮಾಕ್ ಟ್ರಯಲ್‌ಗಳ ಮೂಲಕ ಪ್ರಾಯೋಗಿಕ ಜ್ಞಾನ ಬೆಳೆಸಿಕೊಳ್ಳಬೇಕು.ಕಾನೂನು ಪದವೀಧರರಿಗೆ
ಕಾರ್ಪೊರೇಟ್ ಕ್ಷೇತ್ರದಲ್ಲಿಯೂ ಉತ್ತಮ ಅವಕಾಶಗಳಿವೆ ಎಂದರು.

ವಕೀಲರ ಸಂಘದ ಕಾರ್ಯದರ್ಶಿ ಎಚ್.ಎಂ. ಮಂಜುನಾಥ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮಾತ್ರ ಓದದೆ ಕಾನೂನು ವಿಷಯಗಳನ್ನು ಆಳವಾಗಿ ಅಧ್ಯಯನ ಮಾಡಬೇಕು ಎಂದರು.

ಪ್ರಾಂಶುಪಾಲೆ ಶಿಲ್ಪಾ ಜಿ. ಬಿರಾದಾರ ಮಾತನಾಡಿ, ಕಾಲೇಜಿನಲ್ಲಿ ಉಚಿತ ಕಾನೂನು ಅರಿವು ಕೇಂದ್ರ ಸ್ಥಾಪಿಸಿ ಗ್ರಾಮೀಣ ಭಾಗದ ಬಡವರಿಗೆ ಕಾನೂನು ನೆರವು ಒದಗಿಸುವ ಉದ್ದೇಶವಿದೆ ಎಂದರು.

ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡಾಕೂಟಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರನ್ನು ಎಚ್‌. ಸಂಸ್ಥೆಯ ಕಾರ್ಯದರ್ಶಿ ಎಚ್.ಎಂ. ಪಾರ್ವತಮ್ಮ, ಆಡಳಿತಾಧಿಕಾರಿಗಳು, ವಿವಿಧ ವಿಭಾಗಗಳ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!