ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಣ್ಣನವರ ವ್ಯಕ್ತಿತ್ವಕ್ಕೆ ಅಪಮಾನ ಸಲ್ಲದು; ವಚನ ಸಾಹಿತ್ಯದ ಘನತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ.

ಬಸವಣ್ಣನವರ ಘನತೆಗೆ ಧಕ್ಕೆ ತರುವ ವಿಚಾರಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಮಠಾಧೀಶರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಕೊಪ್ಪಳ: ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು ಹಾಗೂ ಶರಣ ಪರಂಪರೆಯ ಘನತೆಗೆ ಧಕ್ಕೆ ತರುವಂತಹ ವಿಚಾರಗಳನ್ನು ಖಂಡಿಸಿ, ಲೇಖಕ ರವಿ ಹಂಜ್ ಅವರ ‘ಬಸವ ಮಂಟಪ’ ಕೃತಿಗೆ ಸಂಬಂಧಿಸಿದ ವಿವಾದದ ಕುರಿತು ಸೂಕ್ತ ಪರಿಶೀಲನೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಮಠಾಧೀಶರು ಹಾಗೂ ಬಸವಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

12ನೇ ಶತಮಾನದಲ್ಲಿಯೇ ಜಗತ್ತಿಗೆ ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರು ಇಡೀ ಮಾನವಕುಲಕ್ಕೆ ದಾರಿದೀಪವಾಗಿದ್ದಾರೆ. ಅವರ ವಚನಗಳು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಸೀಮಿತವಾಗದೆ ವಿಶ್ವಮಾನವ ಸಂದೇಶವನ್ನು ಸಾರುತ್ತವೆ. ಇಂತಹ ಮಹಾನ್ ಚೇತನದ ವ್ಯಕ್ತಿತ್ವ ಹಾಗೂ ಶರಣ ಪರಂಪರೆಯ ಕುರಿತು ಬರೆಯುವಾಗ ಲೇಖಕರು ಜವಾಬ್ದಾರಿ ಮತ್ತು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಸಂಶೋಧನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಬಸವಣ್ಣನವರ ಘನತೆ, ಗೌರವ ಹಾಗೂ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತರುವ ವಿಚಾರಗಳನ್ನು ಸಮರ್ಥಿಸಲು ಸಾಧ್ಯವಿಲ್ಲ. ವಚನ ಸಾಹಿತ್ಯ, ಐತಿಹಾಸಿಕ ದಾಖಲೆಗಳು ಮತ್ತು ಸಂಶೋಧನಾ ಆಧಾರಗಳಿಗೆ ಆದ್ಯತೆ ನೀಡಬೇಕು. ಈ ವಿವಾದದ ಕುರಿತು ಸರ್ಕಾರವು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ಸೂಕ್ತ ಪರಿಶೀಲನೆ ನಡೆಸಿ ನ್ಯಾಯಯುತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು.
ಅದೇ ರೀತಿ ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕ ದ್ವೇಷ, ಬೆದರಿಕೆ ಅಥವಾ ಹಿಂಸಾತ್ಮಕ ಪ್ರತಿಕ್ರಿಯೆ ಸಲ್ಲದು. ಭಿನ್ನಾಭಿಪ್ರಾಯಗಳಿಗೆ ವಿಚಾರ, ದಾಖಲೆ ಮತ್ತು ಸಂವಾದದ ಮೂಲಕ ಉತ್ತರ ನೀಡಬೇಕು. ಬಸವಣ್ಣನವರ ವಚನ ಸಾಹಿತ್ಯ ಹಾಗೂ ಶರಣ ಸಂಸ್ಕೃತಿಯ ಘನತೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮನವಿ ಸಲ್ಲಿಸಿದವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಡಾ. ಮಹಾದೇವ ಮಹಾಸ್ವಾಮಿಗಳು, ಅನ್ನದಾನೇಶ್ವರ ಶಾಖಾ ಮಠ, ಕುಕನೂರು; ಪೂಜ್ಯ ಶ್ರೀ ಅಭಿನವ ಶ್ರೀಕಂಠ ಸ್ವಾಮಿಗಳು, ಶ್ರೀಮತ್ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಗಿಣಿಗೇರಿ; ಪೂಜ್ಯ ಶ್ರೀ ನಾಗಲಿಂಗ ಮಹಾಸ್ವಾಮಿಗಳು; ಪೂಜ್ಯ ಶ್ರೀ ನರಸಿಂಹ ಮಹಾಸ್ವಾಮಿಗಳು; ಪರಮಪೂಜ್ಯ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮೈನಳ್ಳಿ; ಶ್ರೀ ನಾಗಭೂಷಣ ಶಿವಾಚಾರ್ಯರು, ಶ್ರೀಶೈಲ ಮಲ್ಲಿಕಾರ್ಜುನ ಶಾಖಾ ಮಠ, ಕಂಪಸಾಗರ; ಬಸವಪರ ಸಂಘಟನಾಕಾರರಾದ ಶ್ರೀ ಶಿವಕುಮಾರ ಏಣಿಗಿ, ಶ್ರೀಮತಿ ಮಂಜುಳಾ ಸೋಮನಾಳ, ಶ್ರೀ ಗಂಗಾಧರ ವಸ್ತ್ರದ, ಶ್ರೀ ಸೋಮಯ್ಯ ಕೆ. ಹಿರೇಮಠ, ಶ್ರೀ ಶಿವಮೂರ್ತಯ್ಯ ಕುಟಗನಹಳ್ಳಿ, ಶ್ರೀ ಶಿವಕುಮಾರ ಗುಳಗಣ್ಣವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳು ಮತ್ತು ವಚನ ಸಾಹಿತ್ಯದ ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಈ ಮನವಿ ಸಲ್ಲಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!