ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವಜನತೆ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಜೀವ ರಕ್ಷಕರಾಗಬೇಕು: ಶಾಸಕ ಜೆ.ಎನ್. ಗಣೇಶ್

ಕಂಪ್ಲಿ: “ರಕ್ತದಾನವು ಅತ್ಯಂತ ಶ್ರೇಷ್ಠವಾದ ದಾನವಾಗಿದ್ದು, ಇದು ಮತ್ತೊಬ್ಬರ ಅಮೂಲ್ಯ ಪ್ರಾಣವನ್ನು ಉಳಿಸಲು ನೆರವಾಗುತ್ತದೆ. ಯುವಜನತೆ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಶಾಸಕ ಜೆ. ಎನ್. ಗಣೇಶ್ ಕರೆ ನೀಡಿದರು.
ಪಟ್ಟಣದ ವರಲಕ್ಷ್ಮೀ ಬ್ಯಾಂಕ್ ಮುಂಭಾಗದಲ್ಲಿ ಆರೋಗ್ಯ ಇಲಾಖೆ ಹಾಗೂ ಕಂಪ್ಲಿಯ 4ನೇ ವಾರ್ಡಿನ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ‘ಬೃಹತ್ ರಕ್ತದಾನ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಕ್ತದಾನ ಮಾಡುವುದರಿಂದ ದಾನಿಗಳ ಆರೋಗ್ಯವೂ ವೃದ್ಧಿಯಾಗುತ್ತದೆ. ಈ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಎಸ್. ರುದ್ರಮುನಿ ಮಾತನಾಡಿ, “ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕೆಂದಿಲ್ಲ, ರಕ್ತದಾನಿಯಾದರೂ ಸಾಕು. ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಸಂಗ್ರಹವಾದ ರಕ್ತವನ್ನು ರಕ್ತ ಭಂಡಾರಗಳು ಬಡವರಿಗೆ ಮತ್ತು ಅಗತ್ಯವಿರುವವರಿಗೆ ಸಕಾಲಕ್ಕೆ ನೀಡಬೇಕು” ಎಂದು ಆಶಿಸಿದರು.
ಶಿಬಿರದಲ್ಲಿ ನೂರಾರು ಯುವಕರು ಉತ್ಸಾಹದಿಂದ ರಕ್ತದಾನ ಮಾಡಿದರು. ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ಸಿಬ್ಬಂದಿ ರಕ್ತ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಜೆಸ್ಕಾಂ ನಿರ್ದೇಶಕ ಕೆ. ಷಣ್ಮುಖಪ್ಪ, ರಾಜ್ಯ ದಿಶಾ ಸಮಿತಿ ಸದಸ್ಯ ಎ.ಸಿ. ದಾನಪ್ಪ, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ, ಸಂಘದ ಗೌರವಾಧ್ಯಕ್ಷ ನೀಲಪ್ಪ, ವೈದ್ಯರಾದ ಡಾ. ರವೀಂದ್ರ ಕನಿಕೇರಿ, ಡಾ. ಮಲ್ಲೇಶಪ್ಪ, ಸ್ವಾಮಿ ವಿವೇಕಾನಂದ ರಕ್ತ ಭಂಡಾರ ಕೇಂದ್ರದ ಮುಖ್ಯಸ್ಥ ಜಿ. ಗೋಪಾಲರೆಡ್ಡಿ, ಮುಖಂಡರಾದ ಬಿ. ನಾರಾಯಣಪ್ಪ, ಕರಿಬಸವನಗೌಡ, ಹೊನ್ನಳ್ಳಿ ಗಂಗಾಧರ, ಬಿ. ಸಿದ್ದಪ್ಪ, ಆಟೋ ರಘು, ಡಿಶ್ ಪ್ರಸಾದ್, ಎನ್. ಗಂಗಣ್ಣ, ಗೋಪಾಲ, ಪೇಂಟರ್ ಮಸ್ತಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!