ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉತ್ತಮ ವ್ಯಕ್ತಿತ್ವ, ಸಂವಹನ ಕೌಶಲ್ಯದಿಂದ ಯಶಸ್ಸು

ಹುನಗುಂದ : ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ, ಸಂವಹನ ಕೌಶಲ ಹಾಗೂ ಅವಿರತ ಪರಿಶ್ರಮದಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯ’ ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ ಹೇಳಿದರು.
ಅವರು ಇಲ್ಲಿಯ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರಮ್ಮ ಚರಂತಿಮಠ ನರ್ಸಿಂಗ್ ಸೈನ್ಸ್ ಕಾಲೇಜಿನಲ್ಲಿ ಬುಧವಾರ ‘ವ್ಯಕ್ತಿತ್ವ ವಿಕಸನ ಹಾಗೂ ಸಂವಹನ ಕೌಶಲ್ಯ’ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು. ‘ಭವಿಷ್ಯದ ನಿಮ್ಮ ವೃತ್ತಿಪರ ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಆತ್ಮವಿಶ್ವಾಸ, ಕಾನೂನು ಪಾಲನೆ ಅಗತ್ಯವಿದೆ. ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಕರೆ ನೀಡಿದರು
‘ಕಾನೂನು ಅರಿವು ಹೊಂದುವುದು ಮತ್ತು ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಅವಶ್ಯಕವಾಗಿದೆ. ಪ್ರತಿಯೊಬ್ಬ ಪ್ರಜೆಯೂ ಕಾನೂನಿನ ಮೂಲಭೂತ ಜ್ಞಾನವನ್ನು ತಿಳಿದುಕೊಂಡಾಗ ಮಾತ್ರ ಸ್ವಸ್ಥ ಮತ್ತು ಶಿಸ್ತುಬದ್ಧ ಸಮಾಜ ನಿರ್ಮಾಣ ಸಾಧ್ಯ’ ಎಂದರು.
ಸಾನ್ನಿಧ್ಯ ವಹಿಸಿದ್ದ ಗುರುಮಹಾಂತ ಶ್ರೀ ಮಾತನಾಡಿ, ‘ಶಿಸ್ತು, ದಕ್ಷತೆ, ಪ್ರಾಮಾಣಿಕತೆ, ಅಂತಃಕರಣ ಹೊಂದಿರುವ ನ್ಯಾಯಮೂರ್ತಿ ಬಿ.ಎ.ಪಾಟೀಲರು ಮಾದರಿ ವ್ಯಕ್ತಿತ್ವ ಹೊಂದಿದ್ದಾರೆ. ಅವರನ್ನು ಸ್ಪೂರ್ತಿಯಾಗಿಟ್ಟುಕೊಂಡು ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ರೋಗಿಗಳ ಬಗ್ಗೆ ಸಹಾನುಭೂತಿ ಹೊಂದಿರಬೇಕು’ ಎಂದರು.
ವಿ.ಮ.ವಿ.ವ ಸಂಘದ ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಎಸ್ ಕಡಪಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ , ‘ಯುವಕರು ಆರೋಗ್ಯ ಕಾಪಾಡಿಕೊಂಡು, ಶಿಸ್ತು, ಸಮಯಪಾಲನೆ, ಮಾಡುವ ಕೆಲಸದಲ್ಲಿ ಬದ್ಧತೆ, ಹಿತ ಮಿತವಾದ ಮಾತು, ಗುರು ಹಿರಿಯರ ಬಗ್ಗೆ ಆದರ ಹೊಂದುವ ಮೂಲಕ ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು’ ಎಂದರು.

ವಿಮವಿವ ಸಂಘದ ನಿರ್ದೇಶಕ ಬಿ.ಎಸ್. ಕೆಂದೂರ, ಎಂ.ಐ. ಕತ್ತಿ, ಹಾಗೂ ರವಿ ಎಂ. ಹುಚನೂರ ಉಪಸ್ಥಿತರಿದ್ದರು. ಪ್ರಾಚಾರ್ಯ ಸಂಗಮೇಶ ಬಿ. ಪಟ್ಟಣಶೆಟ್ಟಿ ಸ್ವಾಗತಿಸಿದರು.
ಸಮಾರಂಭದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಬಿ. ಚಳಗೇರಿ ಅತಿಥಿಗಳನ್ನು ಪರಿಚಯಿಸಿದರು.
ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು. ವಿಜಯಲಕ್ಷ್ಮೀ ವಂದನಾರ್ಪಣೆ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!