ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೋಗಿಗಳಿಗೆ, ಬುದ್ಧಿಮಾಂದ್ಯ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ.

ಕಂಪ್ಲಿ: ಪಟ್ಟಣದ ಕೊಟ್ಟಾಲ್ ರಸ್ತೆಯ ತಹಶೀಲ್ದಾರ್ ಕಛೇರಿ ಎದುರುಗಡೆಯಲ್ಲಿರುವ ಸಮಗ್ರ ಸಾಮಾಜಿಕ ಮತ್ತು ನೈತಿಕ ಅಭಿವೃದ್ಧಿ (ಸ್ಮೈಲ್) ಸಂಸ್ಥೆಯ ಕಂಪಲಿರಾಯ ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಾಲೆಯ ಮಕ್ಕಳಿಗೆ ಮತ್ತು ಇಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ಬುಧವಾರ ವಿತರಿಸುವ ಮೂಲಕ ‘ಸೇವಾ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಂತರ ವಿಶ್ವಕರ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಡಿ.ಮೌನೇಶ ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾಡು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿಯಾಗಿದ್ದು, ತಮ್ಮ ದೂರದೃಷ್ಟಿ, ನಡೆ-ನುಡಿ ಹಾಗೂ ನಿರಂತರ ಸಮಾಜಮುಖಿ ಸೇವೆಯ ಮೂಲಕ ಸಮಾಜದ ಅಭಿವೃದ್ಧಿಗೆ ಅದ್ವಿತೀಯ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು
ತಾಲೂಕು ಯೋಜನಾಧಿಕಾರಿ ಎಲ್. ರಾಘವೇಂದ್ರ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳವು ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಅನ್ನದಾನ ಮತ್ತು ಧಾರ್ಮಿಕ ಕಾರ್ಯಗಳ ಮೂಲಕ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಸಮಾಜದ ಏಳಿಗೆಯೇ ಜೀವನದ ಗುರಿಯಾಗಿದೆ ಎಂದರು.
ಸಮಗ್ರ ಸಾಮಾಜಿಕ ಮತ್ತು ನೈತಿಕ ಅಭಿವೃದ್ಧಿ (ಸ್ಮೈಲ್) ಸಂಸ್ಥೆಯ ಮುಖ್ಯಸ್ಥ ಉಮಾಪತಿಗೌಡ ಮಾತನಾಡಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಸೇವಾ ಪರಂಪರೆ ಸಾಗುತ್ತಿದೆ. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಕೊಡುಗೆಯ ಮೂಲಕ ಲಕ್ಷಾಂತರ ಜನರ ಬದುಕಿಗೆ ಆಶಾಕಿರಣವಾಗಿದೆ. ಧರ್ಮಾಧಿಕಾರಿಗಳ ಜನ್ಮದಿನದ ಅಂಗವಾಗಿ ಆಸ್ಪತ್ರೆ, ಬುದ್ಧಿಮಾಂದ್ಯ ಶಾಲೆಯಲ್ಲಿ ಹಾಲು, ಹಣ್ಣು, ಬ್ರೆಡ್ ವಿತರಿಸಿ, ಸೇವೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಸದಸ್ಯರಾದ ಡಾ.ವೆಂಕಟೇಶ ಸಿ.ಭರಮಕ್ಕನವರ್, ಉಮಾಮಹೇಶ್ವರಿ, ನಿವೃತ್ತ ಡಾ.ಜಗನ್ನಾಥ ಹಿರೇಮಠ, ಗೌರವ ಸಲಹೆಗಾರ ಡಾ.ಎ.ಸಿ.ದಾನಪ್ಪ, ಕೃಷಿ ಅಧಿಕಾರಿ ಸಂಜುಕುಮಾರ, ಮೇಲ್ವಿಚಾರಕ ಮಂಜುಳಾ, ಮಂಜುನಾಥ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!