ಉತ್ತರ ಕನ್ನಡ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಗ್ರಾಮ ಪಂಚಾಯ್ತಿಗಳ ಆಶ್ರಯದಲ್ಲಿ ಇಂದು ನಗರದ ತಾಲೂಕ ಕ್ರೀಡಾಂಗಣ ಮುಂಡಗೋಡದಲ್ಲಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟ ನೆರವೇರಿತು ತಾಲೂಕಾ ಪಂಚಾಯ್ತಿ ಕೆ.ದಾಸನಾಕೊಪ್ಪ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು ದೈಹಿಕ ಶಿಕ್ಷಕರಾದ ಉಲ್ಲಾಸ್ ಅವರು ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಶಿರಸಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ.ಈ ಸಂದರ್ಭದಲ್ಲಿ ತಾಲೂಕ ದೈಹಿಕ ಶಿಕ್ಷಣ ಅಧಿಕಾರಿಗಳಾದ ಹನ್ಮಂತ ವಡ್ಡರ ಹಾಗೂ ಮುಂಡಗೋಡ ತಾಲೂಕ ದೈಹಿಕ ಶಿಕ್ಷಣ ಶಿಕ್ಷಕರು ಹಾಜರಿದ್ದರು.
