ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ರಾಯಚೂರು ಮಾಜಿ ಸಾಮಾಜಿಕ ಅರಣ್ಯ ವಲಯ ಅಧಿಕಾರಿಗಳಾದ ACF ಬೀರಪ್ಪ ಅವರು ಭೇಟಿ ನೀಡಿ ವೀಕ್ಷಣೆ ಮಾಡಿ ವನಸಿರಿ ಫೌಂಡೇಶನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಕಡಿದು ಹಾಕಿದ ಆಲದ ಮರಕ್ಕೆ ಮರುಜೀವ ನೀಡಿ ಬೆಳಸಿ ಸಾರ್ವಜನಿಕರಿಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಿದ ವನಸಿರಿ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ನಾವುಗಳು ಮಾಡಬೇಕಾದ ಕಾರ್ಯವನ್ನು ವನಸಿರಿ ಫೌಂಡೇಶನ್ ವತಿಯಿಂದ ಮಾಡುತ್ತಿದ್ದಾರೆ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಅದನ್ನು ವನಸಿರಿ ತಂಡದವರು ಅವರು ಚಾಚೂತಪ್ಪದೇ ಮಾಡುತ್ತಿದ್ದಾರೆ ಮತ್ತು ತಮ್ಮ ಜೊತೆಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಸರ ರಕ್ಷಕರನ್ನು ಹುಟ್ಟುಹಾಕುತ್ತಿದ್ದಾರೆ ಇದರ ಮೂಲಕ ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ಸಾರ್ವಜನಿಕರಿಗೆ ತಿಳಿಪಡಿಸುತ್ತಿರುವುದು ಒಂದು ಹೆಮ್ಮೆಯ ವಿಷಯ. ವನಸಿರಿ ತಂಡ ಕಾರ್ಯಕ್ಕೆ ನಮ್ಮ ಅರಣ್ಯ ಇಲಾಖೆಯ ವತಿಯಿಂದ ಏನೆಲ್ಲಾ ಸಹಾಯ ಸಹಕಾರ ಬೇಕು ಅದನ್ನು ನನ್ನ ಅಧಿಕಾರದ ಅವಧಿಯಲ್ಲಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಮುಂದೇನು ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ, ಸಿಂಧನೂರು ಸಾಮಾಜಿಕ ಅರಣ್ಯ ವಲಯ ಅಧಿಕಾರಿ ರುದ್ರಮುನಿ,ಶಂಕರಗೌಡ ಎಲೆಕೂಡ್ಲಿಗಿ,ರಂಜಾನ್ ಸಾಬ್,ಆದನಗೌಡ ಪೂಲಭಾವಿ,ಶಿವು ಎಲೆಕೂಡ್ಲಿಗಿ,ಅಮರಯ್ಯ ಸ್ವಾಮಿ ಪತ್ರಿಮಠ ಇನ್ನಿತರರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.