ರಾಯಚೂರು ಜಿಲ್ಲೆಯ ಲಿಂಗಸೂಗೂರು ನಗರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ,ಜೆಸ್ಕಾಂ ಹಾಗೂ ವಿದ್ಯುತ್ ಗುತ್ತಿಗೆದಾರರ ಸೇವಾ ಮಂಡಳಿ ಸಮಿತಿ ವತಿಯಿಂದ ಶ್ರೀ ಬಸವಣ್ಣ ದೇವರ ಗುಡಿಯ ಜೀರ್ಣೋದ್ಧಾರ ಹಾಗೂ ನೂತನ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.
ನೂತನ ಶ್ರೀ ಆಂಜನೇಯ ಸ್ವಾಮಿ ದೇವರ ಮೂರ್ತಿಯನ್ನು ಲಿಂಗಸೂಗೂರು ನಗರದ ಶ್ರೀ ದೊಡ್ಡ ಆಂಜನೇಯ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯರು ಕುಂಭ,ಕಳಸ,ಡೊಳ್ಳು ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಇಂದು ಅದ್ದೂರಿಯಾಗಿ ನೆರವೇರಿತು.
ರವಿವಾರ ಬ್ರಾಹ್ಮೀ ಮುಹೂರ್ತದಲ್ಲಿ ಬೆಳಗ್ಗೆ 5ಗಂಟೆಗೆಯಿಂದ ಶ್ರೀ ಆಂಜನೇಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ,ಘನ ಹೋಮ,ನವಗ್ರಹ ಹೋಮ,ಕಳಸ ಅಭಿಷೇಕ, ಪುಷ್ಪಾಲಂಕಾರ,ನೈವೇದ್ಯ ಮಹಾ ಮಂಗಳಾರತಿ ಹಾಗೂ ಮಹಾಪ್ರಸಾದ ನಡೆಯಲಿದ್ದು ನಗರದ ಸಕಲ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಂಜನೇಯ ದೇವಾಲಯ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯ ಸದ್ಭಕ್ತ ಮಂಡಳಿಯ ಸದಸ್ಯರು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ,ಜೆಸ್ಕಾಂ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ವಿದ್ಯುತ್ ಗುತ್ತಿಗೆದಾರರು ಹಾಗೂ ಊರಿನ ಹಿರಿಯರು ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.