ಹನೂರು:ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಬ್ಬೆ ಹುಣಸಿ ಕೆರೆಯಲ್ಲಿ ಮೀನು ಸಾಕಾಣಿಕೆಗೆ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಅಕ್ಟೋಬರ್ 11 ರಂದು ಕರೆಯಲು ತೀರ್ಮಾನಿಸಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ತಿಳಿಸಿದ್ದಾರೆ.
ಹುಬ್ಬೇ ಹುಣಸೆ ಕೆರೆ ಮೀನು ಸಾಕಾಣಿಕೆ ಹರಾಜು ಪ್ರಕ್ರಿಯೆ ಕುರಿತು ಇಂದು ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಯಾವುದೇ ಟೆಂಡರ್ ಇಲ್ಲದೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಮೀನು ಹಿಡಿದು ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಸ್ಥಳೀಯ ಸಾರ್ವಜನಿಕರು ದೂರು ನೀಡಿದ ಪರಿಣಾಮ ಗ್ರಾಮ ಪಂಚಾಯತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹರಾಜಿನಲ್ಲಿ ಭಾಗವಹಿಸುವವರು ಮುಂಗಡವಾಗಿ 10,000 ನಗದನ್ನು ಪಾವತಿಸಿ ಅರ್ಹತೆ ಪಡೆದುಕೊಳ್ಳುವ ಜೊತೆಗೆ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವರು ಕಡ್ಡಾಯವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ವ್ಯಕ್ತಿಗಳಾಗಿರಬೇಕು.ಸರ್ಕಾರಿ ಹರಾಜು 50000 ದಿಂದ ಆರಂಭವಾಗುತ್ತದೆ,ನಿಯಮಾವಳಿಗಳು ಇರುತ್ತವೆ ಎಂದು ತಿಳಿಸಿದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.