ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಾಲಗತ್ತಿ ಗ್ರಾಮ ಪಂಚಾಯಿತಿ ಗೌಡಗೇರಾ ಗ್ರಾಮದ ಸರ್ಕಾರ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯಾದಗಿರಿ ಮತ್ತು ಗ್ರಾಮ್ಸ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಚರ್ಚಾ ಸ್ಪರ್ಧೆ, ಜೊತೆಗೆ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ನೀರನ್ನು ಮಿತವಾಗಿ ಬಳಸಿ ಶುದ್ಧವಾದ ನೀರನ್ನು ಉಪಯೋಗಿಸಿ ಮತ್ತು ಹಲವಾರು ಘೋಷಣೆಗಳು ಕೂಗುವುದರ ಮೂಲಕ ಜಾಗೃತಿ ಮೂಡಿಸಲಾಯಿತು. ಸದರಿ ಈ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳು ಹಾಗೂ ಸಹಶಿಕ್ಷಕರು ಅತಿಥಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಐ.ಎಸ್.ಎ ಸಿಬ್ಬಂದಿ ಭಾಗಿಯಾಗಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ