ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ

ಹನೂರು:ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ ಪದವಿ ಪೂರ್ವ ಶಾಲಾ ಶಿಕ್ಷಣ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಹನೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಲೋಕ್ಕನಹಳ್ಳಿ ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಕಾಲೇಜು,ಮಂಗಲ ಇವರುಗಳ ಸಂಯುಕ್ತ ಅಶ್ರಯದಲ್ಲಿ ಹನೂರು ತಾಲ್ಲೂಕು ಮಟ್ಟದ,ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಯಿತು.
ಕಾರ್ಯಕ್ರಮವನ್ನು ಶಾಸಕ ಎಂ.ಆರ್. ಮಂಜುನಾಥ್ ಅವರು ಕ್ರೀಡಾ ಕೂಟದ ಧ್ವಜಾರೋಹಣ ಹಾಗೂ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಕ್ರೀಡಾ ಕೂಟಕ್ಕೆ ತಟ್ಟೆ ಎಸೆಯುವ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದರು,
ಕ್ರೀಡಾಕೂಟವನ್ನು ಮನರಂಜನೆ ವಿಧವಾಗಿ ತೆಗೆದುಕೊಳ್ಳಬೇಕು,ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಅದನ್ನು ಸಮಾನವಾಗಿ ತೆಗೆದು ಕೊಳ್ಳಬೇಕು,ಕ್ರೀಡೆಯಲ್ಲಿ ಭಾಗವಹಿಸುವಿಕೆ ನಮ್ಮಲ್ಲಿ ಲವ ಲವಿಕೆಯನ್ನು ಉಂಟು ಮಾಡುತ್ತದೆ,
ಕ್ರೀಡೆಯಲ್ಲಿ ಗೆಲ್ಲುತ್ತೇವೆ ಎನ್ನುವ ಭರವಸೆಯಿಂದ, ಮಾನಸಿಕವಾಗಿ ಸದೃಢವಾಗುವುದರ ಜೊತೆಗೆ ದೈಹಿಕವಾಗಿ ಬೆಳವಣಿಗೆಯಾಗಲು ಸಹಕಾರ ವಾಗಲಿದೆ,ರಾಷ್ಟ್ರಮಟ್ಟದಲ್ಲೂ ಸಹ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ, ರಾಷ್ಟ್ರ ಮಟ್ಟಕ್ಕೆ ಭಾಗವಹಿಸುವ ಅವಕಾಶ ವನ್ನು ಪಡೆದುಕೊಳ್ಳಬೇಕು,ಪ್ರತಿಭೆಗಳನ್ನು ಹೊರ ತರಲು ಉತ್ತಮ ವೇದಿಕೆಯಾಗಿದೆ,ಕ್ರೀಡಾ ಅಕಾಡಮಿ ತೆರೆಯಲು ಚಿಂತನೆ ಮಾಡಲಾಗಿದೆ,ಕ್ರೀಡೆಗೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಕ್ರೀಡಾ ಸೌಕರ್ಯಗಳನ್ನು ಒದಗಿಸಲು ನಾನು ನಿಮ್ಮ ಜೊತೆ ಇರುತ್ತೇನೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜುಗಳ ಉಪ ನಿರ್ದೇಶಕರಾದ,ಮಂಜುನಾಥ್ ಪ್ರಸನ್ನ, ಕ್ಷೇತ್ರ ಶಿಕ್ಷಣಧಿಕಾರಿ ಶಿವರಾಜು,ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆಂಪರಾಜು,ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಯೋಗೇಶ್,ಪ್ರಾಂಶುಪಾಲರಾದ ಮುತ್ತರಾಜು, ದೈಹಿಕ ಶಿಕ್ಷಣ ಪರಿವಿಕ್ಷಕ ಮಹದೇವ್,ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ