ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ,ಹೊನ್ನಾಳಿ ತಾಲೂಕು ಘಟಕ ವತಿಯಿಂದ ಮನವಿ ಪತ್ರ ಸಲ್ಲಿಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ,
ಹೊನ್ನಾಳಿ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್ ಪುಟ್ಟರಾಜು ಗೌಡ ಮುಖಾಂತರ ಶ್ರೀ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಬೆಂಗಳೂರು ಇವರಿಗೆ
ಮನವಿ ಪತ್ರವನ್ನು ಸಲ್ಲಿಸಲಾಯಿತು.
ಸ್ವಾತಂತ್ರ ದೊರೆತು 77ನೇ ವರ್ಷಕ್ಕೆ ಸಾಗುತ್ತಿರುವ ಈ ಸಂದರ್ಭದಲ್ಲಿ ಈವರೆಗೂ ನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಹುತೇಕ ತೊಂಬತ್ತರಷ್ಟು ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳು ಸರ್ಕಾರದಿಂದ ಮರೀಚಿಕೆಯಾಗಿರುವುದು ನೋವಿನ ಸಂಗತಿ.ಹಗಲು ರಾತ್ರಿ ಎನ್ನದೆ ಸರ್ಕಾರ ಹಾಗೂ ಸಾರ್ವಜನಿಕರ ಮಧ್ಯೆ ಸಂಪರ್ಕ ಸೇತುವೆಯ ಜೊತೆಗೆ ಪ್ರಾಣದ ಹಂಗನ್ನು ತೊರೆದು ಭ್ರಷ್ಟಾಚಾರಗಳನ್ನು ಬಯಲಿಗೆ ಎಳೆಯುವುದರಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದ್ದರೂ ಸಹ
ತುತ್ತಿನ ಚೀಲ ತುಂಬಿಸಿಕೊಳ್ಳುವುದಕ್ಕೂ ಪತ್ರಕರ್ತರು ಪರದಾಡುತ್ತಿರುವುದು ವಿಷಾದಕರ.
ಪ್ರಮುಖ ಬೇಡಿಕೆಗಾಗಿ ಮನವಿ ಸರ್ಕಾರ ಹಾಗೂ ಸಾರ್ವಜನಿಕರ ಮಧ್ಯೆ ಸಂಪರ್ಕ ಸೇತುವೆಯಾಗಿ ಪ್ರಾಣದ ಹoಗನ್ನು ತೊರೆದು ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಪತ್ರಕರ್ತರುಗಳಿಗೆ ಪತ್ರಕರ್ತರ ರಕ್ಷಣಾ ಕಾಯ್ದೆ ಶೀಘ್ರ ಜಾರಿಗೊಳಿಸಬೇಕು.
ನಾಡಿನ ಪತ್ರಕರ್ತರ ಹಿತಕ್ಕಾಗಿ ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.
ಪತ್ರಕರ್ತರು ಕರ್ತವ್ಯ ನಿರ್ವಹಿಸುವಾಗ ಸಹಜ ಸಾವು ಹಾಗೂ ಅಪಘಾತದಿಂದ ಮೃತಪಟ್ಟರೆ ಆ ಪತ್ರಕರ್ತರ ಕುಟುಂಬಕ್ಕೆ ಸರಕಾರದಿಂದ 10 ಲಕ್ಷ ರೂಗಳ ಪರಿಹಾರ ಒದಗಿಸಬೇಕು.
ಎಂಟು 2018-19ರ ಆಯವ್ಯಯದಲ್ಲಿ ದಿನಪತ್ರಿಕೆ ಹಂಚುವವರ ಕ್ಷೇಮಾಭಿವೃದ್ಧಿಗೆ ಕ್ಷೇಮ ನಿಧಿ ಅಂದಿನ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಘೋಷಣೆ ಯಾಗಿದ್ದರೂ ಹೇಳಿಕೆಗೆ ಮಾತ್ರ ಸೀಮಿತವಾದ ಈ ನಿಧಿಯನ್ನು ಕೂಡಲೇ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಯ ಖಾತೆಗೆ ಸರ್ಕಾರ ಜಮಾಾವಣೆ ಮಾಡಬೇಕು.
ಈ ಮನವಿಯ ಹೋರಾಟವಾದ ಒಂದು ತಿಂಗಳ ನಂತರ ರಾಜ್ಯಾದ್ಯಂತ ನಮ್ಮ ಕಾ.ನಿ.ಪ.ಧ್ವನಿ ಸಂಘಟನೆಯ ಸದಸ್ಯರುಗಳಿಂದ ನಾಡಿನ ನೊಂದಂತಹ ಪತ್ರಕರ್ತರ ಪರ ರಕ್ತದಿಂದ ಸಹಿ ಮಾಡಿದ ಪತ್ರದ ಚಳುವಳಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಲುಪುವವರೆಗೂ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ,ರಾಜ್ಯಾಧ್ಯಕ್ಷ ಹಾಗೂ ಸಂಸ್ಥಾಪಕ ಬಾಂಗ್ಲೆ ಮಲ್ಲಿಕಾರ್ಜುನ ಹೇಳಿದರು.ಈ ಸಂದರ್ಭದಲ್ಲಿ ಪತ್ರಕರ್ತರಾದ
ಸಕಿಲ್ ಆಮದ್,ಷಣ್ಮುಖಯ್ಯ ಎಂ.ಪಿ.ಎಂ, ಸುರೇಶ್ ಬಿ,ಪ್ರಭಾಕರ್,ಭರತ್ ಸತ್ತಗಿ ಇನ್ನು ಮುಂತಾದವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ