ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ,ನಿಮ್ಮಿಂದಲೇ ಘೋಷಣೆ ಆಗಿರುವ ಹನೂರು ನೂತನ ತಾಲ್ಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚಿನ ಅನುದಾನ ನೀಡುವ ಮೂಲಕ ಕ್ಷೇತ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಹನೂರು ಅರಣ್ಯ ಹಾಗೂ ಗುಡ್ಡಗಾಡು ಪ್ರದೇಶಗಳಿಂದ ಕೂಡಿದೆ.ಈ ಭಾಗದಲ್ಲಿ ನೂರಕ್ಕೂ ಹೆಚ್ಚು ಸೋಲಿಗರ ಹಾಡಿಗಳು ಇದ್ದು,ಕೃಷಿಯನ್ನೇ ನಂಬಿ ಕಡುಬಡವರು ಹೆಚ್ಚಿನ ಸಂಖ್ಯೆಯಲ್ಲಿ ಜೀವನ ನಡೆಸುತ್ತಿದ್ದಾರೆ ಹೀಗಾಗಿ ಕ್ಷೇತ್ರ ಅಭಿವೃದ್ಧಿ ಹಾಗೂ ಜನರ ಹಿತ ದೃಷ್ಟಿಯಿಂದ ಶಿಕ್ಷಣ ಸೇರಿದಂತೆ ಕುಡಿಯುವ ನೀರು,ವಿದ್ಯುತ್ ಪೂರೈಕೆ ಹಾಗೂ ಅಗತ್ಯ ಮೂಲ ಸೌಕರ್ಯ ಅಗತ್ಯವಾಗಿದೆ ಇದಕ್ಕೆ ಅನುದಾನ ಬೇಕಾಗಿದೆ ಎಂದರು.
ರಾಜ್ಯದ ಗಡಿ ಭಾಗದಲ್ಲಿರುವ ಹನೂರು ತಾಲೂಕಿನ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು, ನೀರಾವರಿ ವ್ಯವಸ್ಥೆ ಕಲ್ಪಿಸಬೇಕು,ಗ್ರಾಮೀಣ ಭಾಗಗಳಲ್ಲಿ ರಸ್ತೆ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು,ಈ ಅಭಿವೃದ್ಧಿ ಕಾರ್ಯಕ್ಕೆ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಅಗತ್ಯವಾಗಿದೆ ಹೀಗಾಗಿ ಮುಖ್ಯಮಂತ್ರಿಗಳು ಅನುದಾನವನ್ನು ಒದಗಿಸಿಕೊಡಬೇಕು ಅಲ್ಲದೆ ಈ ಭಾಗದ ಸೋಲಿಗರ ಜೀವನಕ್ಕೆ ಕಟ್ಟಿಕೊಡಬೇಕು ಎಂದರಲ್ಲದೆ ಈ ಹಿಂದೆ ಹಲವು ಯೋಜನೆಗಳು ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದರೂ ಸಹ ಕೆಲವು ಇನ್ನೂ ಸಂಪೂರ್ಣ ಅಭಿವೃದ್ಧಿ ಹೊಂದಿಲ್ಲ, ಹೀಗಾಗಿ ಸರ್ಕಾರದಿಂದ ನೀಡಿರುವ ಅನುದಾನದ ಜೊತೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಅನುದಾನ ನೀಡಬೇಕು ಇದರಿಂದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.