ಯಾದಗಿರಿ:ನಗರದ ಸುಭಾಷ್ ವೃತ್ತದಲ್ಲಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ) ಬಣದಿಂದ ಕಾವೇರಿ ನೀರಿಗಾಗಿ ಹೋರಾಟಕ್ಕೆ ಕೈ ಜೋಡಿಸೋಣ ಎಂದು ಯಾದಗಿರಿ ಜಿಲ್ಲಾಧ್ಯಕ್ಷ ಟಿ.ಎನ್.ಭೀಮು ನಾಯಕ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಕ್ಷಣಾ ವೇದಿಕೆ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಟಿ.ಎನ್.ಭೀಮು ನಾಯಕ ಅವರು ಮಾತನಾಡುತ್ತಾ ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮತ್ತು ತಾಲೂಕು,ಹೋಬಳಿ,ಗ್ರಾಮ ಕಾರ್ಯಕರ್ತರು ಹಾಗೂ ಜಿಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹೋರಾಟದಲ್ಲಿ ಭಾಗಿಯಾಗಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್