ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಾಮನೂರು ಶಿವಶಂಕರಪ್ಪ ಅವರಿಗೆ ನಿಂದನೆ:ಶಾಸಕ ಕೊತ್ತನೂರು ಮಂಜುನಾಥ್ ವಿರುದ್ಧ ತೇಜಸ್ವಿ ಆಕ್ರೋಶ

ಮೈಸೂರು:ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಕುರಿತು ಏಕವಚನದಲ್ಲಿ ಮಾತನಾಡಿದ ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ವಿರುದ್ದ ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊತ್ತನೂರು ಮಂಜು ಅವರು ಒಬ್ಬ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ವೀರಶೈವ ಲಿಂಗಾಯತ ಸಮುದಾಯದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಕುರಿತು ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಸಮಾಜಕ್ಕೆ ಅಪಾರವಾಗಿದೆ ನಿನ್ನೆ ಮೊನ್ನೆ ಆಕಸ್ಮಿಕವಾಗಿ ಶಾಸಕರಾಗಿರುವ ನಿಮಗೆ ಅವರ ಬಗ್ಗೆ ಮಾತನಾಡುವ ನೈತಿಕತೆ ಮತ್ತು ಯೋಗ್ಯತೆ ಇಲ್ಲ ಎಂದು ಟೀಕಿಸಿದ್ದಾರೆ.
ಕೂಡಲೇ ಕೊತ್ತನೂರು ಮಂಜು ಶಾಮನೂರು ಶಿವಶಂಕರಪ್ಪ ಅವರ ಕ್ಷಮೆ ಕೇಳಬೇಕು ಎಂದು ತೇಜಸ್ವಿ ಒತ್ತಾಯಿಸಿದ್ದಾರೆ.
ಕ್ಷಮೆ ಕೇಳದಿದ್ದಲ್ಲಿ ಮೈಸೂರಿಗೆ ಆಗಮಿಸಿದ ವೇಳೆ ಮುಖಕ್ಕೆ ಮಸಿ ಬಳಿದು ತಕ್ಕ ಉತ್ತರ ನೀಡುತ್ತೇವೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಮಂಜುನಾಥ್ ‌ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ