ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತ ಸಂಘಟನೆಯಿಂದ ಬೃಹತ್ ಹೋರಾಟ

ಅಕ್ಕಿ ಕೊಟ್ಟು ಅನ್ನ ರಾಮಯ್ಯನಾಗುವದಕ್ಕಿಂತಲೂ ನೀರು ಕೊಟ್ಟರೆ ರೈತರೆಲ್ಲರೂ ಅನ್ನರಾಮಯ್ಯರಾಗುತ್ತಾರೆ:ನೂರ್ ಅಹ್ಮದ್

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ಕೇಂದ್ರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ನಿನ್ನೆ ದಿನಾಂಕ 09-10-2023 ರಂದು ಬೃಹತ್ ಪ್ರತಿಭಟನೆ ನಡೆಯಿತು. ಮಲ್ಲಿಕಾರ್ಜುನ ಹಗರಟಗಿಯವರ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳಿಂದ ಕರ್ನಾಟಕ ರಾಜ್ಯ ರೈತ ಸಂಘಟನೆಯ ಅಧ್ಯಕ್ಷರು ಮತ್ತು ರೈತ ಸಂಘಟನೆ ಪದಾಧಿಕಾರಿಗಳು,ಸದಸ್ಯರು ಬೃಹತ್ ಮಟ್ಟದಲ್ಲಿ ಹೋರಾಟವನ್ನು ಮಾಡಿ ತಹಶೀಲ್ದಾರ್ ರವರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಪತ್ರವನ್ನು ಸಲ್ಲಿಸಿ ರೈತರು ವಿವಿಧ ರೀತಿಯ ತೊಂದರೆಗಳು ಮತ್ತು ಹಲವಾರು ಬೇಡಿಕೆಗಳಾದ ರೈತರಿಗೆ ಹಗಲೊತ್ತಿನಲ್ಲಿ ಸುಮಾರು ಏಳು ಗಂಟೆಗಳ ಕಾಲ ಪಂಪಸೆಟ್ ಗಳಿಗೆ ವಿದ್ಯುತ್ ಒದಗಿಸಬೇಕು,ಸಂಪೂರ್ಣ ನಮ್ಮ ಭೂಮಿ ಮಳೆಯ ಆಶ್ರಿತಿವಾಗಿರುವುದರಿಂದ ಈ ವರ್ಷ ಮಳೆಯ ಅಭಾವದಿಂದ ಎಲ್ಲಾ ಬೆಳೆಗಳು ಒಣಗಿ ಬರಡಾಗಿರುವುದರಿಂದ ಸಂಪೂರ್ಣ ಬರಗಾಲ ಗೋಷಣೆ ಮಾಡಿ ಪರಿಹಾರ ವಿತರಣೆ ಮಾಡಬೇಕು, ಬೆಳೆ ವಿಮೆ ಒದಗಿಸಬೇಕು,ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು ಈ ರೀತಿಯಾದ ಹಲವಾರು ರೈತರ ಬೇಡಿಕೆಯನ್ನು ತಹಶೀಲ್ದಾರ್ ಅವರ ಮುಖಾಂತರ ಮುಖ್ಯ ಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತಗೌಡ ಮಾಲಿ ಪಾಟೀಲ್ ರವರು ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಮಲ್ಲನಗೌಡ ಹಗರಟಗಿಯವರು ಕೂಡಾ ನಮ್ಮ ಹೋರಾಟದ ಕೂಗು ಕೇಳಿ ನಮ್ಮೆಲ್ಲಾ ಬೇಡಿಕೆ ಈಡೇರಿಸದಿದ್ದರೆ ಬೆಂಗಳೂರಿನ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರದ ವಿರುದ್ದ ಗುಡುಗಿದರು,ಈ ಹೋರಾಟದಲ್ಲಿ ಯಾದಗಿರಿ ಜಿಲ್ಲಾಧ್ಯಕ್ಷರಾದ ಮಲ್ಲಣಗೌಡ ಹಗರಟಗಿ,ಪ್ರಶಾಂತಗೌಡ ಮಾಲಿ ಪಾಟೀಲ್,ರಾಜ್ಯ ಸಂಚಾಲಕರಾದ ನೂರ್ ಅಹ್ಮದ್, ರಾಜ್ಯ ಕಾರ್ಯದರ್ಶಿಗಳಾದ ಗುರುನಾಥ ರೆಡ್ಡಿ,ಮಲ್ಲನಗೌಡ,ಮಹಿಪಾಲ ರೆಡ್ಡಿ,ಸಂಗನಗೌಡ,ನಿಂಗನಗೌಡ,ನಾಗಯ್ಯ ಸ್ವಾಮಿ ಹಾಗೂ ರೈತ ಮುಖಂಡರು ಇತರರಿದ್ದರು.
ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!