ಹನೂರು:ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಹಾಗೂ ಪಚ್ಚೆದೊಡ್ಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ನೀರು ಚರಂಡಿಯಲ್ಲಿ ಹೋಗದೆ ರಸ್ತೆ ಮಧ್ಯೆ ಕೆರೆಯಂತೆ ನಿಂತಿದ್ದು ಪಕ್ಕದಲ್ಲೇ ಪಡಿತರ ಅಕ್ಕಿಯನ್ನು ಪಡೆದುಕೊಳ್ಳುತ್ತಿದ್ದು ಅಕ್ಕಿಯನ್ನು ತೆಗೆದುಕೊಂಡು ಹೋಗಲು ಮಹಿಳೆಯರು ಮಕ್ಕಳು ಹರ ಸಹಾಸ ಪಡುವ ಸನ್ನಿವೇಶ ಉಂಟಾಗಿದೆ. ಗ್ರಾಮಸ್ಥರು ಸಂಬಂಧ ಪಟ್ಟ ಅಧಿಕಾರಿಗಳ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಾ ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸದಸ್ಯರು ಸರಿಯಾದ ರೀತಿಯಲ್ಲಿ ಚರಂಡಿ ವ್ಯವಸ್ಥೆ ಮಾಡಿ ಕೊಡಬೇಕೆಂದು ಗ್ರಾಮಸ್ಥರು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.
ವರದಿ-ಪ್ರದೀಪ್ ಕುಮಾರ್ ಕೆ,ಕಾಂಚಳ್ಳಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.