ಬೀದರ್:ಕನ್ನಡ ರಾಜ್ಯೋತ್ಸವದ ನಿಮಿತ್ತ ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ರಿ.) ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದಿಂದ ಕೊಡಲಾಗುವ ಜಿಲ್ಲೆಯ ಸರ್ವ ಶ್ರೇಷ್ಠ ಪ್ರಶಸ್ತಿಯಾಗಿರುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಬೀದರ್ ಜಿಲ್ಲೆಯ ಆಣದೂರ ಗ್ರಾಮದ ಚೇತನ್ ಸೊರಳ್ಳಿ ಅವರು ಆಯ್ಕೆಯಾಗಿದ್ದಾರೆ.
ಚೇತನ್ ಸೊರಳ್ಳಿ ಅವರು ಸುಮಾರು ವರ್ಷಗಳಿಂದ ನಿರಂತರವಾಗಿ ಬೇಸಿಗೆ ಕಾಲದಲ್ಲಿ ಅರಣ್ಯ ಪ್ರದೇಶಕ್ಕೆ ತೆರಳಿ ಪಕ್ಷಿಗಳಿಗೆ ನೀರುಣಿಸುವುದರ ಮೂಲಕ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥಿಯಾಗಿ ಸಮಾಜ ಸೇವೆ ಮಾಡುತ್ತಿರುವುದನ್ನು ಗಮನಿಸಿ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯನ್ನು ನ.2 ರಂದು ಬೀದರಿನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಎಂದು ಜಿಲ್ಲಾಧ್ಯಕ್ಷ ಹಣ್ಮು ಪಾಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಸಾಗರ್ ಪಡಸಲೆ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.