ಮೈಸೂರು:ವಿಜಯಪುರ ಜಿಲ್ಲೆಯ ಹೆಸರನ್ನು ಬಸವೇಶ್ವರ ಜಿಲ್ಲೆ ಎಂದು ಮರುನಾಮಕರಣಕ್ಕೆ ಮುಂದಾಗಿರುವ ಸರ್ಕಾರದ ನಡೆ ಸ್ವಾಗತಾರ್ಹ ಎಂದು ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ
ವಿಜಯಪುರ ಜಿಲ್ಲೆಯ ಹೆಸರನ್ನು ‘ಬಸವೇಶ್ವರ ಜಿಲ್ಲೆ ಅಥವಾ ‘ಬಸವ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ತಿಳಿದು ಸಂತಸವಾಗಿದೆ ಎಂದಿದ್ದಾರೆ.
ಐತಿಹಾಸಿಕ ವಿಜಯಪುರ ಜಿಲ್ಲೆಯ ಪುರಾತನ ಹೆಸರು ಬಿಜ್ಜನಹಳ್ಳಿ,ವಿಜಯಪುರ,ಬಿಜಾಪುರ, ಆಗಿತ್ತು ಮೂರು ಶತಮಾನಗಳ ಇತಿಹಾಸದ ಹೆಸರನ್ನು ಬದಲಿಸಿ 2014 ರಲ್ಲಿ ಬಿಜಾಪುರ ಹೆಸರನ್ನು ವಿಜಯಪುರ ಎಂದು ಈಗಿನ ಕಾಂಗ್ರೆಸ್ ಸರ್ಕಾರವೇ ಬದಲಿಸಿತ್ತು.
12ನೇ ಶತಮಾನದ ಸಮಾಜ ಸುಧಾರಕ ಸಮಾನತೆಯ ಹರಿಕಾರ ವಿಶ್ವ ಗುರು ಬಸವೇಶ್ವರರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಜನಿಸಿದ್ದರಿಂದ ಇದೀಗ ಜಿಲ್ಲೆಗೆ ಅವರ ಹೆಸರನ್ನೇ ಇಡಲು ಸರ್ಕಾರ ನಿರ್ಧರಿಸಿರುವುದು ಒಳ್ಳೆಯದು ಎಂದು ತೇಜಸ್ವಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ವತಿಯದ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.