ಯಾದಗಿರಿ:ಕಿತ್ತೂರು ಚೆನ್ನಮ್ಮಳ ಹೋರಾಟ,ಸಾಹಸ,ಎದೆಗಾರಿಕೆಯ ಜೊತೆಗೆ ಆದರ್ಶ ತತ್ವಗಳು ಪ್ರತಿಯೊಬ್ಬರಿಗೂ ಸ್ಪೂರ್ತಿ ಎಂದು ಯಾದಗಿರಿ ಜಿಲ್ಲಾಧಿಕಾರಿಗಳಾದ ಡಾ: ಸುಶೀಲ ಬಿ.ಹೇಳಿದರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ,ನಗರಸಭೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ರಾಣಿ ಚೆನ್ನಮ್ಮಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ರಾಣಿ ಚೆನ್ನಮ್ಮಳ ಹೋರಾಟದ ಇತಿಹಾಸ ರೋಚಕವಾದುದ್ದು.ಸ್ವಾತಂತ್ರ‍್ಯ ಹೋರಾಟಕ್ಕೆ ಮುನ್ನುಡಿ ಬರೆದ ಚೆನ್ನಮ್ಮಳ ಹೋರಾಟದ ಮನೋಭಾವ ಇಂದಿನ ಮಹಿಳೆಯರಿಗೆ ಮಾದರಿಯಾಗಿದೆ ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದರೊಂದಿಗೆ ಚೆನ್ನಮ್ಮಳ ಶೌರ್ಯ,ಸಾಹಸ,ಸಾಧನೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಿವೃತ್ತ ಪ್ರಾಚಾರ್ಯರಾದ ವೆಂಕಟರಾವ್ ಕುಲಕರ್ಣಿ ಉಪನ್ಯಾಸ ನೀಡುತ್ತಾ ಮೊಟ್ಟ ಮೊದಲು ಬ್ರಿಟಿಷರ ವಿರುದ್ಧ ಹೋರಾಟದ ಕಿಚ್ಚನ್ನು ಹಚ್ಚಿದ ಸ್ವಾಭಿಮಾನ ಮಹಿಳೆ,ಕಿತ್ತೂರ ಚೆನ್ನಮ್ಮ ಎಂದು ನುಡಿದರು,ಸ್ವಾತಂತ್ರ‍್ಯಕ್ಕಾಗಿ ತಮ್ಮ ಜೀವದ ಹಂಗನ್ನೇ ತೊರೆದು ಹೋರಾಡಿದ,ಧೈರ್ಯ ಸಾಹಸ ನಿಜಕ್ಕೂ ಮೆಚ್ಚುವಂತದ್ದು ಎಂದು ಬಣ್ಣಿಸಿದರು.ಸಮಾರಂಭದ ವೇದಿಕೆಯ ಮೇಲೆ ಸ್ಥಳೀಯ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು,ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷರಾದ ಮಲ್ಲನಗೌಡ ಪಾಟೀಲ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ,ಶಹಪುರ ಘಟಕದ ಅಧ್ಯಕ್ಷರಾದ ದೇವೇಂದ್ರಪ್ಪ ತೋಟಿಗೇರ,ಅಯ್ಯಣ್ಣ ಹುಂಡೇಕರ ಬಸವಂತರಾಯ ಮಾಲಿ ಪಾಟೀಲ್,ಗುರು ಅಂಗಡಿ,ಅನಿಲ್ ಬಿರಾದರ್,ವಿಜಯ ಕುಮಾರ ಹೊನೇಕಲ್,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು,ಬಸವರಾಜ ಸಿನ್ನೂರು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು,ಬೂದಯ ಹಿರೇಮಠ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮಗಳು ಜರುಗಿದವು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.