ಹನೂರು:ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು ನವೆಂಬರ್ 1ರಂದು ತಾಲ್ಲೂಕು ಕೇಂದ್ರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಮಾಡಲು ತಿಳಿಸಿದರು
ನಂತರ ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯ ಕ್ರಮ ನೆರವೇರಲಿದೆ ನಾಡಗೀತೆ ಹಾಗೂ ರಾಷ್ಟ್ರಗೀತೆ ಹಾಡುವುದು ನಂತರ 9.30ಕ್ಕೆ ಆರ್. ಎಂ.ಸಿ ಆವರಣದಿಂದ ಶುರುವಾಗಿ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ,ನಂತರ 11ಗಂಟೆಗೆ ವೇದಿಕೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ,ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಪ್ರತಿ ಗ್ರಾಮದಲ್ಲಿ ಕಾರ್ಯಕ್ರಮದ ಬಗ್ಗೆ ಜನರಿಗೆ ತಿಳಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಶಾಸಕರು ಸೂಚಿಸಿದರು.
ತಹಸೀಲ್ದಾರ್ ಗುರುಪ್ರಸಾದ್ ಎ ಇ ಇ ಶಂಕರ್,ಇಓ ಉಮೇಶ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಸಿ ಡಿ ಪಿ ಓ ನಂಜಮಣಿ,ಕೃಷಿ ಅಧಿಕಾರಿ ಸುಂದ್ರಮ್ಮ,ಪಶು ವೈದ್ಯಧಿಕಾರಿ ಸಿದ್ದರಾಜು,ಜಿಲ್ಲಾಪಂಚಾಯತ್ ಇಂಜಿನಿಯರ್ ಮಂಜು ಮತ್ತಿತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್