ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ…? ತಪ್ಪಾಗಿದೆಯೇ…? ಸರಿಪಡಿಸಿಕೊಳ್ಳಲು ಅವಕಾಶ


ಮತದಾರರ ಪಟ್ಟಿ ಪ್ರಕಟಗೊಳಿಸಿದ್ದು, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತದೆ. 2024ರ ಜನವರಿ 1ರೊಳಗೆ ತಿದ್ದುಪಡಿ ಮಾಡಿಕೊಳ್ಳಲು, ಹೆಸರು ಸೇರ್ಪಡೆಗೆ ಅವಕಾಶ ಇರಲಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಡಿಸೆಂಬರ್ 9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರಲಿದೆ. ಅದೇ ರೀತಿ ನಾಲ್ಕು ವಿಶೇಷ ಅಭಿಯಾನಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಕಳೆದ ಬಾರಿ ನಡೆಸಿದ ಪರಿಷ್ಕರಣೆ ಬಳಿಕ ಅಂತಿಮವಾಗಿ 5,08,53,845 ಮತದಾರರಿದ್ದರು.ಈಗ ಕರಡು ಮತದಾರರ ಪಟ್ಟಿಯಲ್ಲಿ 5,33,77,162 ಮತದಾರರಿದ್ದಾರೆ. ಇಡೀ ರಾಜ್ಯದಲ್ಲಿ ಬೆಂಗಳೂರು ದಕ್ಷಿಣದಲ್ಲಿ ಅತೀ ಹೆಚ್ಚು ಮತದಾರರಿದ್ದರೆ ಶೃಂಗೇರಿಯಲ್ಲಿ ಕಡಿಮೆ ಮತದಾರರಿದ್ದಾರೆ ಎಂದು ವಿವರಿಸಿದರು. ಪ್ರಸ್ತುತ 13,45,707 ಯುವ ಮತದಾರರಿದ್ದು, ತೃತೀಯ ಲಿಂಗಿಗಳು 4,896, ಸಾಗರೋತ್ತರ ಮತದಾರರು 3,055 ಮತದಾರರು ಇದ್ದಾರೆ. ಮುಖ್ಯ ಚುನಾವಣಾಧಿಕಾರಿ ವೆಬ್ ಸೈಟ್‌ನಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಇಲ್ಲಿ ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದು. ಹಾಗೆಯೇ ತಿದ್ದುಪಡಿ ಅಗತ್ಯವಿದ್ದರೆ ಪ್ರತಿ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ನೋಂದಣಾಧಿಕಾರಿ ಅಥವಾ ಸಹಾಯಕ ನೋಂದಣಾಧಿಕಾರಿ ನಿಗದಿತ ನಮೂನೆಗಳಲ್ಲಿ ಸಲ್ಲಿಸಬೇಕಾಗುತ್ತದೆ.
ಹೆಸರು ತಪ್ಪಾಗಿರುವುದು, ಫೋಟೋ ವ್ಯತ್ಯಾಸ ಇರುವುದು, ಮೊಬೈಲ್ ಸಂಖ್ಯೆ, ಲಿಂಗ ತಿದ್ದುಪಡಿ, ಹುಟ್ಟಿದ ದಿನಾಂಕ ಬದಲಾವಣೆ, ವಿಳಾಸ ಬದಲಾವಣೆ ಹೀಗೆ ಹಲವು ರೀತಿಯ ತಿದ್ದುಪಡಿಗೆ ಅವಕಾಶವಿರುತ್ತದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ