ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ 34 ಗ್ರಾಮ ಪಂಚಾಯತಿಗಳಲ್ಲಿ ಒಂದಾದ ಸಿದ್ದಾಪುರ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನವಾದ ಸಿದ್ದಾಪುರದಲ್ಲಿ ಅನೈರ್ಮಲ್ಯ ತಾಂಡವಾಡುತ್ತಿದೆ.ಗ್ರಾಮದ ಗಟಾರಗಳ ನೀರು ಕಸದಿಂದ ತುಂಬಿ ಮುಂದಕ್ಕೆ ಹೋಗದೆ ಗಬ್ಬು ವಾಸನೆ ಬರುತ್ತಿದೆ ಇಷ್ಟಾದರೂ ಅಧಿಕಾರಿಗಳು ಮಾತ್ರ ಸ್ವಚ್ಚತೆಯ ಕಡೆಗೆ ಗಮನ ಹರಿಸುತ್ತಿಲ್ಲ ಈ ವಿಚಾರವಾಗಿ ಗ್ರಾಮಸ್ಥರು ಅಧಿಕಾರಿಗಳಿಗೆ ಮತ್ತು ಪಂಚಾಯ್ತಿ ಸದಸ್ಯರಿಗೆ ಹಿಡಿ ಶಾಪ ಹಾಕುತ್ತಿದ್ದು ಮಾರಣಾಂತಿಕ ರೋಗಗಳು ಹರಡುತ್ತವೆಂಬ ಭಯದಲ್ಲಿ ಇಲ್ಲಿನ ವಾಸಿಸುತ್ತಿದ್ದಾರೆ ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಗ್ರಾಮದಲ್ಲಿ ಸ್ವಚ್ಚತಾ ಕಾರ್ಯವನ್ನು ಆರಂಭಿಸಬೇಕಾಗಿದೆ ಇಲ್ಲದಿದ್ದರೆ ಗ್ರಾಮದಲ್ಲಿ,ಡೆಂಗಿ,ಮಲೇರಿಯಾ,ಟೈಫಾಯಿಡ್ ನಂತಹ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ವರದಿಗಾರರು-ಪೃಥ್ವಿರಾಜ್.ಜಿ.ವಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.