ಯಾದಗಿರಿ:ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಮಾಡುವ ನೋಂದಾಯಿತ ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಯಾದಗಿರಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ ಅವರು ಹೇಳಿದರು.
ಈಚೆಗೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನರೇಗಾ ಯೋಜನೆ ಜಲಶಕ್ತಿ ಅಭಿಯಾನದಡಿ ಪ್ರಗತಿಯಲ್ಲಿದ್ದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರಿಗಾಗಿ ಕಾಮಗಾರಿ ಸ್ಥಳದಲ್ಲಿ ಆಯೋಜಿಸಿದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮುನಿಯಮ್ಮ ಕಡಿಮೆ ರಕ್ತದೊತ್ತಡ ಹಾಗೂ ತೀವ್ರ ರಕ್ತಹೀನತೆ ಹೊಂದಿರುವುದು ಪತ್ತೆಯಾಯಿತು.
ಮುನಿಯಮ್ಮಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಅಗತ್ಯವಾದ ಹಿನ್ನಲೆ ಆರೋಗ್ಯ ಅಧಿಕಾರಿಗಳು ನೀಡಿದ ಸೂಚನೆ ಮೇರೆಗೆ ಕಲ್ಬರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ರಕ್ತಹೀನತೆ ತೀವ್ರತೆ ಬಗ್ಗೆ ತಪಾಸಣೆ ಮಾಡಿದ ವೈದ್ಯರು ನಾಲ್ಕು ಬಾಟಲ್ ರಕ್ತದ ಅವಶ್ಯಕತೆ ಎಂದು ತಿಳಿಸಿದರು ಈಗಾಗಲೇ ಮುನಿಯಮ್ಮಳಿಗೆ ಮೂರು ಬಾಟಲ್ ರಕ್ತವನ್ನು ಕೊಡಲಾಗಿದ್ದು,ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ.
ಗ್ರಾಮೀಣ ಪ್ರದೇಶದ ದುರ್ಬಲ ವರ್ಗದ ಕೂಲಿ ಕಾರ್ಮಿಕರು ತಮ್ಮ ದೈನಂದಿನ ಕೆಲಸ ಕಾರ್ಯಗಳ ಮಧ್ಯೆ ತಮ್ಮ ಆರೋಗ್ಯದ ಸುರಕ್ಷತೆಗೆ ಹೆಚ್ಚು ಗಮನ ಕೊಡುವುದಿಲ್ಲ ಹೆಚ್ಚಿನ ಚಿಕಿತ್ಸೆಗೆ ದೊಡ್ಡ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವ ಆರ್ಥಿಕ ಸ್ಥಿತಿ ಇರುವುದಿಲ್ಲ ಹೀಗಾಗಿ ಆರೋಗ್ಯದ ಕುಟುಂಬದ ಹಲವು ಕಾರಣಗಳಿಂದ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆಗುತ್ತಿರಲಿಲ್ಲ ಈ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ನಮ್ಮಂತ ನೂರಾರು ಬಡ ಕುಟುಂಬದ ಸದಸ್ಯರು ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ನಮ್ಮ ಜೀವ ಉಳಿಸಿಕೊಟ್ಟಂತ ಆಗಿದೆ ಎಂದು ಯರಗೋಳ ಗ್ರಾಮದ ಕೂಲಿ ಕಾರ್ಮಿಕರು ತಿಳಿಸಿದರು.
ವರದಿ:ಶಿವರಾಜ ಸಾಹುಕಾರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.